ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಯಾರಿಗೂ 2 ಕ್ಷೇತ್ರದಿಂದ ಸ್ಪರ್ಧೆ ಮಾಡುವ ಅವಕಾಶ ನೀಡೋದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಎಲ್ಲಾ ನಾಯಕರು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಎಂದಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರೋದು. ನಮ್ಮ ಪಕ್ಷದ ನಾಯಕರಿಗೆ ಗೆಲ್ಲುವ ವಿಶ್ವಾಸವಿದೆ. ಇನ್ನು ಸ್ಥಳೀಯವಾಗಿ ಮುಂದಿನ ಐದು ವರ್ಷಕ್ಕೂ ನೀವು ಶಾಸಕ ಅರವಿಂದ ಬೆಲ್ಲದ್ ಅವರಿಗೆ ಆಶೀರ್ವಾದ ಮಾಡುತ್ತೀರಿ ಅನ್ನೋ ನಂಬಿಕೆ ನನಗಿದೆ. ಅರವಿಂದ ಬೆಲ್ಲದ್ ಪರೀಕ್ಷೆ ಬರೆದಿದ್ದಾರೆ. ನೀವು ಇವಾಗ ಮಾರ್ಕ್ಸ್ ಹಾಕಬೇಕು, ನನ್ನ ಪ್ರಕಾರ ಅರವಿಂದ ಬೆಲ್ಲದ್ ಡಿಸ್ಟಿಂಕ್ಷನ್ನಲ್ಲಿ ಪಾಸ್ ಆಗುತ್ತಾರೆ ಎಂದು ಅರವಿಂದ ಬೆಲ್ಲದ ಪರ ಮತಯಾಚಿಸಿದರು.
ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ಬಳಿ 1,248 ಮನೆಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಹ್ಲಾದ್ ಜೋಶಿ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಕಮಾಲ್ ಮಾಡಲಿದೆ ಎಂದ್ರು.