Saturday, April 26, 2025
Homeಟಾಪ್ ನ್ಯೂಸ್DROUPADI MURMU: ರಾಷ್ಟ್ರಪತಿಗಳಿಗೆ 66ನೇ ಹುಟ್ಟುಹಬ್ಬದ ಸಂಭ್ರಮ

DROUPADI MURMU: ರಾಷ್ಟ್ರಪತಿಗಳಿಗೆ 66ನೇ ಹುಟ್ಟುಹಬ್ಬದ ಸಂಭ್ರಮ

ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 66ನೇ ವರ್ಷಕ್ಕೆ ಕಾಲಿರಿಸಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ಜಗನ್ನಾಥ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ಅಪರಿಮಿತ ಸೇವೆ ಮತ್ತು ತ್ಯಾಗವು ನಮ್ಮೆಲ್ಲರಿಗೂ ಸ್ಫೂರ್ತಿದಾಯಕ. ತುಳಿತಕ್ಕೆ ಒಳಗಾದ ಮತ್ತು ಬಡವರಿಗೆ ಸಹಾಯ ಮಾಡುವ ಅವರ ವಿಧಾನ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಿದೆ ಎಂದು ಟ್ವೀಟ್ ಮಾಡಿ ಶುಭಕೋರಿದ್ದಾರೆ.

ಪ್ರಧಾನ ಮಂತ್ರಿಗಳಲ್ಲದೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡಾ ಸೇರಿ ಹಲವು ಮಂದಿ ರಾಜಕೀಯ ನಾಯಕರು ಟ್ವೀಟ್ ಮಾಡಿ ಶುಭಕೋರುತ್ತಿದ್ದಾರೆ.

ರಾಷ್ಟ್ರಪತಿಗಳು ಒಡಿಶಾದ ಮಯೂರ್ ಭಂಜ್ ಎಂಬಲ್ಲಿ 1958ರ ಜೂ.20ರಂದು ಜನಿಸಿದ್ದರು. ಆರಂಭಿಕವಾಗಿ ಶಿಕ್ಷಕಿಯಾಗಿ ಜೀವನ ಆರಂಭಿಸಿದ್ದ ಇವರು, ಶಾಸಕಿಯಾಗಿ ಒಡಿಶಾ ವಿಧಾನಸಭೆ ಪ್ರವೇಶಿಸಿ, ಸಚಿವರೂ ಆಗಿದ್ದರು. ನಂತರ ಜಾರ್ಖಂಡ್ ರಾಜ್ಯಪಾಲರಾಗಿ ಪದೋನ್ನತಿ ಪಡೆದು ಸದ್ಯ ದೇಶದ 15ನೇ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!