Wednesday, November 13, 2024
Homeಚುನಾವಣೆ 2023ಬಂಡೀಪುರ ಅಭಯಾರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿ

ಬಂಡೀಪುರ ಅಭಯಾರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿ

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಬಂಡೀಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ.

ಶನಿವಾರ ರಾತ್ರಿ ಆಗಮಿಸಿದ ಪ್ರಧಾನಿ ಮೋದಿ, ಬಂಡೀಪುರ ಅಭಯಾರಣ್ಯದಲ್ಲಿ ಬೆಳ್ಳಂಬೆಳಗ್ಗೆ ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ 2 ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಂಚಾರ ನಡೆಸಲಿದ್ದಾರೆ. ಬಳಿಕ ತಮಿಳುನಾಡಿನ ಮುದುಮಲೈ ಅರಣ್ಯಕ್ಕೆ ಭೇಟಿ ನೀಡಲಿದ್ದಾರೆ.

ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದು, ಹಾಗೇ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೆಳ್ಳಿ-ಬೊಮ್ಮನ್​ ದಂಪತಿಯನ್ನು ಭೇಟಿಯಾಗಿ ಸನ್ಮಾನಿಸಲಿದ್ದಾರೆ. ದಿ ಎಲಿಫೆಂಟ್​ ವಿಸ್ಪರರ್ಸ್ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ. ಬೆಳ್ಳಿ-ಬೊಮ್ಮನ್​ ದಂಪತಿ ಸಾಕ್ಷ್ಯಚಿತ್ರದ ಪಾತ್ರಧಾರಿಗಳಾಗಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!