Saturday, April 26, 2025
Homeಟಾಪ್ ನ್ಯೂಸ್Modi : ಮೋದಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

Modi : ಮೋದಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

ನವದೆಹಲಿ : ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ನಿಗಧಿಯಾಗಿದೆ.
ಭಾನುವಾರ ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರ ಪ್ರಮಾಣ ಸ್ವೀಕರಿಸಲಿದ್ದಾರೆ.

ಪ್ರಧಾನಮಂತ್ರಿಗಳ ಜೊತೆಗೆಕೇಂದ್ರ ಸಚಿವ ಸಂಪುಟದ ಇತರ ಸದಸ್ಯರಿಗೆ ರಾಷ್ಟ್ರಪತಿಗಳು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ, ಮಾಲ್ಡೀವ್ಸ್ ಸೇರಿದಂತೆ ವಿವಿಧ ದೇಶಗಳ ಅಧ್ಯಕ್ಷರು, ಗಣ್ಯರು ಹಾಜರಿರಲಿದ್ದಾರೆ.

ಶುಕ್ರವಾರ ನಡೆದ ಎನ್‌ಡಿಎ ಮೈತ್ರಿಪಕ್ಷಗಳ ಎಲ್ಲ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಯಿತು. ನಂತರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಿದಿ ಮೋದಿಯವರು ಸರ್ಕಾರ ರಚನೆಗೆ ತಮ್ಮ ಹಕ್ಕು ಮಂಡಿಸಿದರು.

ಹೆಚ್ಚಿನ ಸುದ್ದಿ

error: Content is protected !!