Sunday, November 10, 2024
Homeಟಾಪ್ ನ್ಯೂಸ್BREAKING NEWS : ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಏರಿಕೆ - ಸಚಿವ...

BREAKING NEWS : ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಏರಿಕೆ – ಸಚಿವ ಶಿವರಾಜ ತಂಗಡಗಿ ಘೋಷಣೆ

ಬೆಂಗಳೂರು : ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ.

50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಹಿಂದೆ ಪ್ರಶಸ್ತಿ ಮೊತ್ತವನ್ನು 50,000 ಎಂದು ತಿಳಿಸಲಾಗಿತ್ತು.

ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1 ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಏರಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಘೋಷಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!