Monday, April 21, 2025
Homeಟಾಪ್ ನ್ಯೂಸ್ಪುನೀತ್ ಕೆರೆಹಳ್ಳಿ ಸೇರಿ ಐವರು ಆರೋಪಿಗಳು ರಾಮನಗರಕ್ಕೆ

ಪುನೀತ್ ಕೆರೆಹಳ್ಳಿ ಸೇರಿ ಐವರು ಆರೋಪಿಗಳು ರಾಮನಗರಕ್ಕೆ

ರಾಮನಗರ: ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಏಪ್ರಿಲ್​ 5ರಂದು ರಾಜಸ್ಥಾನದಲ್ಲಿ ಬಂಧಿಸಿದ್ದರು. ಈಗ ಪೊಲೀಸರು ಆರೋಪಿಗಳನ್ನು ಕನಕಪುರಕ್ಕೆ ಕರೆತಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಪ್ರಕರಣದ ಹಿನ್ನೆಲೆ ಸಾತನೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಪುನೀತ್ ಕೆರೆಹಳ್ಳಿ, ಸುರೇಶ್ ಕುಮಾರ್, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್‌ ನನ್ನು ರಾಜಸ್ಥಾನದಲ್ಲಿ ಬಂಧಿಸಿದ್ದರು. ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದಿದ್ದರು. ಕ್ಯಾಂಟರ್​ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಷ್ ಪಾಷಾ ಎಂಬುವರ ಮೃತ ದೇಹ, ಘಟನೆ ನಡೆದ 200 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು.

ಈ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ ಮಾಡಿದ್ದು, ಇದ್ರೀಷ್ ಪಾಷಾ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3 ಎಫ್‍ಐಆರ್ ದಾಖಲಾಗಿತ್ತು. ಮೃತನ ಸಹೋದರನ ದೂರಿನ ಮೇರೆಗೆ ಪೊಲೀಸರು ಐಪಿಸಿ ಸೆಕ್ಷನ್ 341, 504, 506, 324, 302, 34ರ ಅನ್ವಯ ಪ್ರಕರಣ ದಾಖಲಾಗಿತ್ತು.

ದೂರು ದಾಖಲಾಗುತ್ತಿದ್ದಂತೆಯೇ ಪುನೀತ್ ಕೆರೆಹಳ್ಳಿ ಹಾಗೂ ಇತರೆ ಆರೋಪಿಗಳು ನಾಪತ್ತೆಯಾಗಿದ್ದರು. ಸಾತನೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ, ಆರೋಪಿಗಳನ್ನು ಏ.5 ರಾಜಸ್ಥಾನದಲ್ಲಿ ಬಂಧಿಸಿದ್ದರು. ಇದೀಗ ಆರೋಪಿಗಳನ್ನು ರಾಮನಗರಕ್ಕೆ ಕರೆತರಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!