Friday, March 21, 2025
Homeಟಾಪ್ ನ್ಯೂಸ್ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್‌ಗೆ ನೋಟಿಸ್‌

ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್‌ಗೆ ನೋಟಿಸ್‌

ಸಂಸದರಾಗಿ ಅನರ್ಹಗೊಂಡಿರುವ ರಾಹುಲ್‌ ಗಾಂಧಿ ಅವರಿಗೆ ಏಪ್ರಿಲ್ 22 ರೊಳಗೆ ದೆಹಲಿಯಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಸರ್ಕಾರ ಮಂಜೂರು ಮಾಡಿರುವ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆಯ ವಸತಿ ಸಮಿತಿ ಸೋಮವಾರ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.

2004ರಲ್ಲಿ ಲೋಕಸಭೆ ಸಂಸದರಾಗಿ ಮೊದಲ ಬಾರಿ ಆಯ್ಕೆಯಾದ ರಾಹುಲ್ ಗಾಂಧಿಗೆ ತುಘಲಕ್ ಲೇನ್ ನಲ್ಲಿ ಬಂಗಲೆ ಮಂಜೂರು ಮಾಡಲಾಗಿತ್ತು.

ಮೋದಿ ಸರ್‌ನೇಮ್‌ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಬಳಿಕ, ಲೋಕಸಭೆಯ ಸದಸ್ಯತ್ವದಿಂದ ರಾಹುಲ್‌ ರನ್ನು ವಜಾಗೊಳಿಸಲಾಗಿತ್ತು. ಸಂಸದ ಸ್ಥಾನದಿಂದ ವಜಾಗೊಳಿಸಿದ ಹಿನ್ನೆಲೆಯಲ್ಲಿ ಅವರ ಬಂಗಲೆಯನ್ನು ತೊರೆಯುವಂತೆ ಕೇಳಲಾಗಿದೆ.

ನಿಯಮಗಳ ಪ್ರಕಾರ, ಅವರು ಅನರ್ಹಗೊಂಡ ದಿನಾಂಕದಿಂದ ಒಂದು ತಿಂಗಳೊಳಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕಾಗುತ್ತದೆ.

ಹೆಚ್ಚಿನ ಸುದ್ದಿ

error: Content is protected !!