Saturday, January 25, 2025
Homeಟಾಪ್ ನ್ಯೂಸ್ಬದಲಾಯ್ತು ರಾಹುಲ್ ಗಾಂಧಿ ಟ್ವಿಟರ್ ಖಾತೆ ಸ್ವ-ವಿವರ

ಬದಲಾಯ್ತು ರಾಹುಲ್ ಗಾಂಧಿ ಟ್ವಿಟರ್ ಖಾತೆ ಸ್ವ-ವಿವರ

ನವದೆಹಲಿ: ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿನ ಸ್ವವಿವರವನ್ನು ಬದಲಾಯಿಸಿದ್ದಾರೆ.

ತಮ್ಮ ಟ್ವಿಟ್ಟರ್ ಖಾತೆಯ ಬಯೋದಲ್ಲಿ Dis’Qualified MP ಎಂದು ಬದಲಾಯಿಸಿದ್ದಾರೆ. ವಯನಾಡು ಸಂಸದ ಎಂದು ಬರೆಯಲಾಗಿದ್ದ ಜಾಗದಲ್ಲಿ ಈಗ ಅನರ್ಹ ಸಂಸದ ಎಂದು ತಾವೇ ಬರೆದುಕೊಂಡಿದ್ದಾರೆ. ಮೋದಿ ಉಪನಾಮ ಕೇಸ್‌ನಲ್ಲಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ತಮ್ಮನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿರುವ ರಾಹುಲ್‌ ಗಾಂಧಿ ತಮ್ಮ ಟ್ವಿಟರ್ ಬಯೋ ಬದಲಾಯಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!