2019 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮೋದಿ ಸರ್‌ನೇಮ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಿ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಭಾಷಣದಲ್ಲಿ ಲಲಿತ್ ಮೋದಿ, ನೀರವ್ ಮೋದಿ, ನರೇಂದ್ರ ಮೋದಿಯನ್ನು ಉಲ್ಲೇಖಿಸಿದ್ದ ರಾಹುಲ್ ಗಾಂಧಿ ʼಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಯಾಕೆ ಇದೆʼ ಎಂದು ಪ್ರಶ್ನಿಸಿದ್ದರು.
ಈ ಹೇಳಿಕೆಯಿಂದ ಮೋದಿ ಉಪನಾಮ ಬಳಸುವ ಸಮುದಾಯಕ್ಕೆ ಅವಮಾನ ಆಗಿದೆ ಎಂದು ಗುಜರಾತಿನ ಶಾಸಕ ಪೂರ್ಣೇಶ್ ಮೋದಿ ಎಂಬವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರಕರಣ ವಿಚಾರಣೆ ಮಾಡಿದ್ದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.