ನವದೆಹಲಿ: ಮೋದಿ ಜೀ, ಪೊಳ್ಳು ಭಾಷಣಗಳನ್ನು ನಿಲ್ಲಿಸಿ. ಭಯೋತ್ಪಾದನೆಯ ಬಗ್ಗೆ ಪಾಕಿಸ್ತಾನದ ಹೇಳಿಕೆಯನ್ನು ನೀವು ಏಕೆ ನಂಬಿದ್ದೀರಿ? ಎಂದು ಹೇಳಿ. ಟ್ರಂಪ್‌ಗೆ ತಲೆಬಾಗುವ ಮೂಲಕ ನೀವು ಭಾರತದ ಹಿತಾಸಕ್ತಿಗಳನ್ನು ಏಕೆ ತ್ಯಾಗ ಮಾಡಿದ್ದೀರಿ ಮತ್ತು ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತಿದೆ? ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಇತ್ತೀಚೆಗೆ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದ ವೀಡಿಯೊದ ಒಂದು ಭಾಗವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಆಪರೇಷನ್ ಸಿಂಧೂರ್ ಅನ್ನು ನಿಲ್ಲಿಸಿದ್ದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಕಾಮೆಂಟ್ ಅನ್ನು ಉಲ್ಲೇಖಿಸಿದ ರಾಗಾ, ಅವರು ಭಾರತದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
मोदी जी, खोखले भाषण देना बंद कीजिए।
सिर्फ इतना बताइए:
1. आतंकवाद पर आपने पाकिस्तान की बात पर भरोसा क्यों किया?
2. ट्रंप के सामने झुककर आपने भारत के हितों की कुर्बानी क्यों दी?
3. आपका ख़ून सिर्फ़ कैमरों के सामने ही क्यों गरम होता है?आपने भारत के सम्मान से समझौता कर लिया! pic.twitter.com/HhjqbjDsaB
— Rahul Gandhi (@RahulGandhi) May 22, 2025
ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMO) ಮಟ್ಟದಲ್ಲಿ ನಡೆದ ಸಂವಾದದ ಸಮಯದಲ್ಲಿ, ಪಾಕಿಸ್ತಾನವು ತನ್ನ ಕಡೆಯಿಂದ ಇನ್ನು ಮುಂದೆ ಯಾವುದೇ ಭಯೋತ್ಪಾದಕ ಚಟುವಟಿಕೆ ಮತ್ತು ಮಿಲಿಟರಿ ಧೈರ್ಯವನ್ನು ತೋರಿಸುವುದಿಲ್ಲ ಎಂದು ಭರವಸೆ ನೀಡಿದೆ ಎಂದು ಮೋದಿ ಹೇಳಿದ್ದಾರೆ. ನಂತರ ಭಾರತವು ತನ್ನ ಹೇಳಿಕೆಯನ್ನು ಸಹ ಪರಿಗಣಿಸಿದೆ ಎಂದು ಹೇಳಿದರು.