Sunday, July 7, 2024
Homeಟಾಪ್ ನ್ಯೂಸ್LOKSABHA : ಲೋಕಸಭೆಯಲ್ಲಿ ಅಶಿಸ್ತು: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸ್ಪೀಕರ್ ಗೆ ಮೊರೆ

LOKSABHA : ಲೋಕಸಭೆಯಲ್ಲಿ ಅಶಿಸ್ತು: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸ್ಪೀಕರ್ ಗೆ ಮೊರೆ

ನವದೆಹಲಿ: ಲೋಕಸಭೆ ಕಲಾಪಕ್ಕೆ ಅಡ್ಡಿಪಡಿಸಲು ಅಶಿಸ್ತು ತೋರಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊ‍ಳ್ಳಲು ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಅವರಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.

ಲೋಕಸಭೆಯಲ್ಲಿ ಅಸಮರ್ಪಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡುವಂತೆ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ನಾವು ಸ್ಪೀಕರ್ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ಲೋಕಸಭೆ ಕಲಾಪವನ್ನು ವ್ಯರ್ಥಗೊಳಿಸಲು ಸಾಧ್ಯವಿಲ್ಲ. ಕಾನೂನು ಎಲ್ಲರಿಗೂ ಒಂದೇ. ರಾಯಲ್ ಕುಟುಂಬದಿಂದ ಬಂದ ಮಾತ್ರಕ್ಕೆ ರಾಯಲ್ ಸೇವೆ ನೀಡಲು ಸಾಧ್ಯವಿಲ್ಲ ಎಂದು ಕಿರಣ್ ರಿಜಿಜು ಲೋಕಸಭೆ ಅಧಿವೇಶನದಲ್ಲಿ ಹೇಳಿದ್ರು

ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ದೊಡ್ಡ ಕುಟುಂಬದವರಿಗೂ ಕಾನೂನು ಅನ್ವಯ ಆಗುತ್ತದೆ ಎಂದು ಕಿರಣ್ ರಿಜಿಜು ತಿಳಿಸಿದರು.

ಹೆಚ್ಚಿನ ಸುದ್ದಿ