ಭಾರತ್ ಜೋಡೋ ಸುದೀರ್ಘ ಯಾತ್ರೆ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಬೆಳಗಾವಿಯ ಯುವ ಕ್ರಾಂತಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ
ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ 1924ರ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಹೀಗಾಗಿ, ಇದೇ ಸ್ಥಳದಿಂದ ‘ಯುವ ಕ್ರಾಂತಿ’ ರ್‍ಯಾಲಿ ಆರಂಭಿಸಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ರು
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಮದ್ಯಾಹ್ನ 1 ಗಂಟೆಯಿಂದ 3.30ರ ವರೆಗೆ ನಡೆಯಲಿರುವ ಕಾಂಗ್ರೆಸ್ ಯುವ ಕ್ರಾಂತಿ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಭಾಗವಹಿಸಲಿದ್ದಾರೆ. ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೆ ಕಾಂಗ್ರೆಸ್ ಮೂರು ಗ್ಯಾರಂಟಿಗಳನ್ನು ಘೋಷಿಸಿದ್ದು, ರಾಹುಲ್ ಗಾಂಧಿಯವರು ನಾಳಿನ ಸಮಾವೇಶದಲ್ಲಿ ಕಾಂಗ್ರೆಸ್‌ನ ನಾಲ್ಕನೇ ಗ್ಯಾರಂಟಿ ಘೋಷಿಸುವ ಸಾಧ್ಯತೆ ಇದೆ. ಯುವಕರಿಗೆ ಉದ್ಯೋಗ ಭರವಸೆ ಅಥವಾ ನಿರುದ್ಯೋಗಿಗಳಿಗೆ ಭತ್ಯೆಯಂತಹ ಘೋಷಣೆ ಮಾಡುವ ನಿರೀಕ್ಷೆ ಇದೆ.
ಈಗಾಗಲೆ, 200 ಯುನಿಟ್ ವರೆಗೆ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಹಾಗೂ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿಯ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿದೆ. ಯುವಕರನ್ನು ಗುರಿಯಾಗಿಸಿಕೊಂಡು ನಾಳೆ ಯುವಕಸ್ನೇಹಿ ಯೋಜನೆಯೊಂದು ಘೋಣೆಯಾಗುವ ಸಾಧ್ಯತೆ ಇದೆ.