Thursday, March 27, 2025
Homeಟಾಪ್ ನ್ಯೂಸ್ಶಿಕ್ಷೆಯ ತೀರ್ಪು ಪ್ರಶ್ನಿಸಲಿರುವ ರಾಹುಲ್ ಗಾಂಧಿ

ಶಿಕ್ಷೆಯ ತೀರ್ಪು ಪ್ರಶ್ನಿಸಲಿರುವ ರಾಹುಲ್ ಗಾಂಧಿ

ನವದೆಹಲಿ: ಮೋದಿ ಉಪನಾಮ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಅಪರಾಧ ಮತ್ತು ಶಿಕ್ಷೆಯ ತೀರ್ಪನ್ನು ಪ್ರಶ್ನಿಸಲು ಮುಂದಾಗಿದ್ದಾರೆ

ಸೋಮವಾರ, ಏಪ್ರಿಲ್ ರಂದು ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ತೀರ್ಪು ಪ್ರಶ್ನಿಸಲಿರುವ ರಾಹುಲ್ ಗಾಂಧಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸೆಷನ್ಸ್ ನ್ಯಾಯಾಲಯವನ್ನು ಕೋರಲಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸುದ್ದಿ

error: Content is protected !!