Sunday, July 7, 2024
Homeಟಾಪ್ ನ್ಯೂಸ್PM Narendra Modi: ರಾಹುಲ್‌ 99 ಮಾರ್ಕ್‌ ಗಳಿಸಿರುವುದು ನೂರಕ್ಕಲ್ಲ, 543ಕ್ಕೆ - ಪ್ರಧಾನಿ ಮೋದಿ...

PM Narendra Modi: ರಾಹುಲ್‌ 99 ಮಾರ್ಕ್‌ ಗಳಿಸಿರುವುದು ನೂರಕ್ಕಲ್ಲ, 543ಕ್ಕೆ – ಪ್ರಧಾನಿ ಮೋದಿ ಲೇವಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಗು ಎಂದು ಬಣ್ಣಿಸಿದ್ದಾರೆ. ಶಾಲಾ ಮಗುವಿನ ಕತೆಯೊಂದನ್ನು ಹೇಳಿದ ಮೋದಿ, ನಮ್ಮ ಈ ಮಗು ಸೋಲಿನಲ್ಲಿ ವಿಶ್ವ ದಾಖಲೆ ಮಾಡಿದೆ ಎಂದು ಲೋಕಸಭಾ ಅಧಿವೇಶನದಲ್ಲಿ ತಮಾಷೆ ಮಾಡಿದ್ದಾರೆ.

ಮಗುವೊಂದು ತಾನು 99 ಅಂಕಗಳನ್ನು ಪಡೆದಿದ್ದೇನೆ ಎಂದು ಎಲ್ಲರಿಗೂ ಹೇಳಿಕೊಂಡು ಖುಷಿ ಪಡುತ್ತಿತ್ತು. ಅದನ್ನು ಕೇಳಿ ಎಲ್ಲರೂ ಆ ಮಗುವಿನ ಬೆನ್ನು ತಟ್ಟುತ್ತಿದ್ದರು. ಆಗ ಬಂದ ಟೀಚರ್ ಆ ಮಗುವಿನ ಬಳಿ ನೀನೇಕೆ ಸ್ವೀಟ್ ಹಂಚುತ್ತಿದ್ದೀಯ? ಎಂದು ಕೇಳಿದರು. ವಾಸ್ತವದ ವಿಷಯ ಏನೆಂದರೆ ಆ ಮಗು 100ಕ್ಕೆ 99 ಅಂಕ ಪಡೆದಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ಮಗುವಿಗೆ 543ರಲ್ಲಿ 99 ಅಂಕ ಪಡೆದಿತ್ತು. ಆ ಮಗು ವಿಫಲತೆಯನ್ನು ವಿಶ್ವ ದಾಖಲೆ ನಿರ್ಮಿಸಿತ್ತು ಎಂಬುದನ್ನು ಆ ಮಗುವಿಗೆ ಅರ್ಥ ಮಾಡಿಸುವವರು ಯಾರು? ಎಂದು ಮೋದಿ ಹಾಸ್ಯಾಸ್ಪದವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ.

1984 ರ ಚುನಾವಣೆಯನ್ನು ನೆನಪಿಸಿಕೊಳ್ಳೋಣ. ಆ ಚುನಾವಣೆಗಳ ನಂತರ ಈ ದೇಶದಲ್ಲಿ 10 ಲೋಕಸಭೆ ಚುನಾವಣೆಗಳು ನಡೆದವು, ಆದರೆ ಒಮ್ಮೆಯೂ ಕಾಂಗ್ರೆಸ್ 250ರ ಗಡಿ ದಾಟಲು ಸಾಧ್ಯವಾಗಲಿಲ್ಲ. ಈ ಬಾರಿ ಕಾಂಗ್ರೆಸ್ 99 ಸ್ಥಾನಗಳನ್ನು ಗಳಿಸಿತು ಎಂದು ಪ್ರಧಾನಿ ಮೋದಿ ಹೇಳಿದರು.

ಹೆಚ್ಚಿನ ಸುದ್ದಿ