ಬೆಂಗಳೂರು : ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ ಹಲವೆಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ (Weather forecast) ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಾದ (Costal regions)
ದಕ್ಷಿಣ ಕನ್ನಡ,ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಉತ್ತರ ಒಳನಾಡು ಜಿಲ್ಲೆಗಳ ಹಲವು ಕಡೆ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು,ರಾಜಧಾನಿ ಬೆಂಗಳೂರು ಕೂಡ ಮಳೆಯ ಹೊಡೆತಕ್ಕೆ ತತ್ತರಿಸುವ ಸಂಭವವಿದೆ.ಈಗಾಗಲೇ ಕಳೆದ 2-3 ದಿನಗಳಿಂದ ನಗರದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಹವಾಮಾ ಇಲಾಖೆ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು,ಇದರ ಪರಿಣಾಮ ರಾಜ್ಯದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಹೀಗಾಗಿ ಸೆ. 6ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆ ಮೂಲಕ ಸೆಪ್ಟೆಂಬರ್ ತಿಂಗಳಲ್ಲೂ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸೂಚನೆ ಸಿಕ್ಕಂತಾಗಿದೆ.