Thursday, March 27, 2025
Homeಬೆಂಗಳೂರುಇಂದು ರಾಜ್ಯದ ಹಲವೆಡೆ ಮಳೆ

ಇಂದು ರಾಜ್ಯದ ಹಲವೆಡೆ ಮಳೆ

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು,ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಶನಿವಾರವೂ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಯ ಒಂದೆರಡು ಕಡೆ ಆಲಿಕಲ್ಲು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗಬಹುದು. ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಹೆಚ್ಚಿನ ಸುದ್ದಿ

error: Content is protected !!