Monday, June 15, 2026
Homeಟಾಪ್ ನ್ಯೂಸ್RAIN UPDATE : ವಾಯುಭಾರ ಕುಸಿತದ ಎಫೆಕ್ಟ್ - ಮುಂಗಾರು ಪೂರ್ವ ಮಳೆ ಚುರುಕು!

RAIN UPDATE : ವಾಯುಭಾರ ಕುಸಿತದ ಎಫೆಕ್ಟ್ – ಮುಂಗಾರು ಪೂರ್ವ ಮಳೆ ಚುರುಕು!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ( Bayofbengal ) ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರೀ-ಮೂನ್ಸೂನ್ (Pre Monsoon) ಮಳೆ (Rain )ಚುರುಕುಗೊಂಡಿದೆ.

ವಾರಾಂತ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಗದಗದಂತಹ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

ಮತ್ತೊಂದೆಡೆ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಮಂಡ್ಯ, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಏಕಾಏಕಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಆರ್ಭಟಿಸುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲೂ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಎದುರಾಗಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ : ಸಮಾಜ ಸೇವಕನ ಮುಖವಾಡ ಕಳಚಿದ ಪೊಲೀಸರು, ಶಿವಾನಂದ ನೀಲಣ್ಣವರ ಅರೆಸ್ಟ್! 

ಹೆಚ್ಚಿನ ಸುದ್ದಿ

Change Language »
error: Content is protected !!