Sunday, January 19, 2025
Homeರಾಜಕೀಯ"ಇತಿಹಾಸ ಗೊತ್ತಿಲ್ಲ ಅಂದ್ರೆ ಸುಮ್ಮನಿರಿ": ಮಿಥುನ್ ರೈ ಹೇಳಿಕೆಗೆ ರಕ್ಷಿತ್ ಶೆಟ್ಟಿ ತಿರುಗೇಟು

“ಇತಿಹಾಸ ಗೊತ್ತಿಲ್ಲ ಅಂದ್ರೆ ಸುಮ್ಮನಿರಿ”: ಮಿಥುನ್ ರೈ ಹೇಳಿಕೆಗೆ ರಕ್ಷಿತ್ ಶೆಟ್ಟಿ ತಿರುಗೇಟು

ಕೃಷ್ಣ ಮಠಕ್ಕೆ ಜಾಗ ಕೊಟ್ಟವರು ಯಾರು ಅನ್ನೋ ವಿಚಾರ ಈಗ ಕರಾವಳಿಯಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ನೀಡಿದ ಹೇಳಿಕೆ ಚರ್ಚೆಯ ಸರಕಾಗಿದೆ. ಕೃಷ್ಣ ಮಠಕ್ಕೆ ಭೂಮಿ ಕೊಟ್ಟವರು ಮುಸ್ಲಿಂ ರಾಜರು ಎಂಬ ಮಿಥುನ್ ರೈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ನಟ ರಕ್ಷಿತ್ ಶೆಟ್ಟಿ ಕೂಡ ಟ್ವೀಟ್ ಮಾಡಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮೂಡಬಿದಿರೆಯಲ್ಲಿ ನಡೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಮಿಥುನ್‌ ರೈ, ಮಾತನಾಡಿ ಉಡುಪಿ ಮಠಕ್ಕೆ ಮುಸ್ಲಿಂ ರಾಜರು ಜಾಗ ನೀಡಿದ್ದಾರೆ. ಸೌಹಾರ್ದತೆಯನ್ನು ಹೊಂದಿರುವ ಜಿಲ್ಲೆ ದಕ್ಷಿಣ ಕನ್ನಡ. ಬಪ್ಪನಾಡು ದುರ್ಗಾಪರಮೇಶ್ವರಿ ದೇವರು ಒಲಿದಿದ್ದು ಬಪ್ಪ ಬ್ಯಾರಿಗೆ. ತುಳುನಾಡಿನಲ್ಲಿ ಪವಾಡ ದೈವ ಕೊರಗಜ್ಜ ಕಟ್ಟೆಯೊಂದರಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಯಿಂದ ಪೂಜೆ ನಡೆಯುತ್ತೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚರ್ಚೆಯಾಗ್ತಿದೆ

 ನಟ ರಕ್ಷಿತ್‌ ಶೆಟ್ಟಿ ಟ್ವೀಟ್ ಮಾಡಿ “ದೇವಾಲಯದ ಪಟ್ಟಣವಾದ ಉಡುಪಿ ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ನಿಮಗೆ ಗೊತ್ತಿಲ್ಲ ಅಂದಮೇಲೆ ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧವಾಗಿ ಮಾತನಾಡುವುದೇಕೆ ?” ಎಂದು ಪ್ರಶ್ನಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!