ಬೆಂಗಳೂರಿನಾದ್ಯಂತ ರಾಮನವಮಿಯಂದು ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ಬಿಬಿಎಂಪಿ ನಿಷೇಧಿಸಿದೆ. ರಾಮನವಮಿ ಪ್ರಯುಕ್ತ ಮಾರ್ಚ್ 30 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕುರಿ, ಕೋಳಿ, ಮೀನು, ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಮಾತ್ರವಲ್ಲದೆ ಚಿಕ್ಕಮಗಳೂರು, ಚಾಮರಾಜನಗರ ಸೇರಿ ಆಯಾ ಜಿಲ್ಲೆಗಳ ನಗರಸಭೆಗಳು ರಾಮನವಮಿಯಂದು ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ.