Sunday, July 7, 2024
Homeಕ್ರೀಡೆT20 CRICKET: ಕೊಹ್ಲಿ, ರೋಹಿತ್‌ ಬಳಿಕ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಇನ್ನೊಬ್ಬ ಸ್ಟಾರ್‌ ಆಲ್‌ರೌಂಡರ್‌!

T20 CRICKET: ಕೊಹ್ಲಿ, ರೋಹಿತ್‌ ಬಳಿಕ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಇನ್ನೊಬ್ಬ ಸ್ಟಾರ್‌ ಆಲ್‌ರೌಂಡರ್‌!

ನವದೆಹಲಿ: ವಿರಾಟ್‌ ಕೊಹ್ಲಿ (Virat Kohli), ರೋಹಿತ್‌ ಶರ್ಮಾ (Rohit Sharma) ನಂತರ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja) ಕೂಡ ಅಂತಾರಾಷ್ಟ್ರೀಯ 20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಟಿ20 ವಿಶ್ವಕಪ್ ಟ್ರೋಫಿಯೊಂದಿಗಿರುವ ಫೋಟೋವನ್ನು ಶೇರ್ ಮಾಡುವ ಮೂಲಕ ಜಡೇಜಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾನು ಸಂತೋಷದಿಂದ ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳುತ್ತಿದ್ದೇನೆ. ಓಡುವ ಕುದುರೆಯಂತೆ ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದುದನ್ನು ನೀಡಲು ಪ್ರಯತ್ನಿಸಿದ್ದೇನೆ. ಇದೀಗ ಇತರ ಸ್ವರೂಪಗಳಲ್ಲಿಯೂ ಅದೇ ರೀತಿಯ ಪ್ರದರ್ಶನವನ್ನು ಮುಂದುವರಿಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ಟಿ20 ವಿಶ್ವಕಪ್ ಟ್ರೋಫಿಯನ್ನು ಗೆಲ್ಲುವ ಕನಸು ನನಸಾಗಿದೆ ಮತ್ತು ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಅತಿದೊಡ್ಡ ಕ್ಷಣವಾಗಿದೆ. ಈ ನೆನಪುಗಳಿಗಾಗಿ ಮತ್ತು ನಿಮ್ಮ ನಿರಂತರ ಪ್ರೋತ್ಸಾಹಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Ravindrasinh jadeja (@royalnavghan)

ನಿನ್ನೆ ಟೀಂ ಇಂಡಿಯಾ ವಿಶ್ವಕಪ್ ಗೆದ್ದ ಬಳಿಕ ತಂಡದ ಮಾಜಿ ನಾಯಕ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಸ್ವಲ್ಪ ಸಮಯದ ನಂತರ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಈ ಸ್ವರೂಪಕ್ಕೆ ವಿದಾಯ ಹೇಳಿದ್ದರು.

ಹೆಚ್ಚಿನ ಸುದ್ದಿ