Thursday, March 20, 2025
Homeಟಾಪ್ ನ್ಯೂಸ್ಪುತ್ರನಿಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಮನವಿ: ವಿ. ಸೋಮಣ್ಣ

ಪುತ್ರನಿಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಮನವಿ: ವಿ. ಸೋಮಣ್ಣ

ನವದೆಹಲಿ: ಗುಬ್ಬಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ. ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವಿ. ಸೋಮಣ್ಣ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಿದ್ದರಾಮಯ್ಯ ನಾವು ಒಟ್ಟಿಗೆ ರಾಜಕೀಯ ಪ್ರವೇಶ ಮಾಡಿದ್ದೇವೆ. ಸಿಎಂ ಆಗಿ ಅವರು ಹಲವು ಕೆಲಸ ಕಾರ್ಯ ಮಾಡಿದ್ದಾರೆ. ಚುನಾವಣೆಯಲ್ಲಿ ಯಾರು ನಿಲ್ಲುವುದು ಬಿಡುವುದು ಬಿಟ್ಟು ಇತಿಹಾಸ ನೋಡಬೇಕು. ಪಕ್ಷ ಯಾರನ್ನ ನಿಲ್ಲಿಸುತ್ತೋ ಅವರು ನಿಲ್ಲಬೇಕು. ಅದು ಸಾಂಕೇತಿಕವಾಗಿ ನಡೆಯುತ್ತಿರುತ್ತದೆ. ನಾನು ಸ್ಪರ್ಧೆ ಮಾಡುವ ಬಗ್ಗೆ ಪ್ರಶ್ನೆನೇ ಇಲ್ಲ ಎಂದು ಹೇಳಿದರು. ಇದೇ ವೇಳೆ ಗುಬ್ಬಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ. ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸೋಮಣ್ಣ ಹೇಳಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಜೊತೆಗಿನ ಮುನಿಸು ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ಆಕಾಶ, ನಾನು ನಕ್ಷತ್ರ, ನಕ್ಷತ್ರ ಯಾವಗ ಮಿಂಚಿ ಮಾಯಾ ಆಗುತ್ತೆ ಗೊತ್ತಿಲ್ಲ. ನಾವು ಅವರ ಜೊತೆಗೆ ಹೋಲಿಕೆ ಮಾಡಿಕೊಳ್ಳಲ್ಲ. ಅವರು ಕರೆದಾಗ ಹೋಗುತ್ತೇನೆ. ನಾನು ಅವರ ಬಗ್ಗೆ ಮಾತಾಡುವಷ್ಟು ದೊಡ್ಡವನಲ್ಲ. ನಾವು ಅವರನ್ನು ತುಂಬಾ ಗೌರವಿಸುತ್ತೇವ ಎಂದರು.

ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದ ಸೋಮಣ್ಣ, ಪುತ್ರನಿಗ ಟಿಕೆಟ್​ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ದೂರವಾಣಿ ಮೂಲಕ ಅಮಿತ್ ಶಾ ಜೊತೆಗೂ ಮಾತುಕತೆ ನಡೆಸಿದ್ದು, ಯಾವುದೇ ನಾಯಕರ ಮಕ್ಕಳಿಗೆ ಟಿಕೆಟ್ ಕೊಟ್ಟಲ್ಲಿ ನನ್ನ ಮಗ ಅರುಣ್​ಗೂ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಅಪ್ಪ ಮಕ್ಕಳಿಗೆ ಟಿಕೆಟ್ ಕೊಡಲ್ಲ ಅಂದರೆ ನನಗೆ ಟಿಕೆಟ್ ಬೇಡ. ನನ್ನ ಮಗ ಅರುಣ್ ಗೆ ಕೊಡಿ ಎಂದು ಅಮಿತ್​ ಶಾಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಸುದ್ದಿ

error: Content is protected !!