Monday, June 15, 2026
Homeಕ್ರೈಂROAD MISHAP: ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಮಹಾರಾಷ್ಟ್ರದ ಎರಡು ಸರ್ಕಾರಿ ಐಷಾರಾಮಿ ಬಸ್‌ಗಳ ನಡುವೆ...

ROAD MISHAP: ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಮಹಾರಾಷ್ಟ್ರದ ಎರಡು ಸರ್ಕಾರಿ ಐಷಾರಾಮಿ ಬಸ್‌ಗಳ ನಡುವೆ ಡಿಕ್ಕಿ

ಸೂರತ್: ಗುಜರಾತ್‌ನ ಸೂರತ್ ಜಿಲ್ಲೆಯ ಬಾರ್ಡೋಲಿ ತಾಲೂಕಿನ ಉವಾ ಗ್ರಾಮದ ಬಳಿ ಎರಡು ಸರ್ಕಾರಿ ಐಷಾರಾಮಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರು(Road Mishap)  ಗಂಭೀರವಾಗಿ ಗಾಯಗೊಂಡಿದ್ದಾರೆ.

ಉರುಳಿ ಬಿದ್ದ ತಕ್ಷಣ ಹೊತ್ತಿದ ಬೆಂಕಿ
ಡಿಕ್ಕಿಯ ರಭಸಕ್ಕೆ ಒಂದು ಬಸ್ ರಸ್ತೆಯಲ್ಲೇ ಉರುಳಿ ಬಿದ್ದು, ತಕ್ಷಣವೇ ಅದರಲ್ಲಿ ಭಾರಿ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತಕ್ಕೀಡಾದ ಎರಡೂ ಬಸ್‌ಗಳು ನೆರೆಯ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (MSRTC) ಸೇರಿದವು ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಸ್‌ಗಳು ಡಿಕ್ಕಿ ಹೊಡೆದು ಅಥವಾ ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದಾಗ ಈ ದುರಂತ ಸಂಭವಿಸಿದೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ ಎಂದು ಬಾರ್ಡೋಲಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಎನ್. ಜಡೇಜಾ ತಿಳಿಸಿದ್ದಾರೆ. ಅಪಘಾತದ ನಂತರ ಒಂದು ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಅದರೊಳಗೆ ಕೆಲವು ಪ್ರಯಾಣಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಂಭವ
ಘಟನಾ ಸ್ಥಳಕ್ಕೆ ಸೂರತ್ ಮತ್ತು ನೆರೆಯ ತಾಪಿ ಜಿಲ್ಲೆಯ ಪೊಲೀಸ್ ತಂಡಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಮತ್ತು ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಗಾಯಗೊಂಡ ಹತ್ತಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ.

ಕಂದಕಕ್ಕೆ ಉರುಳಿದ ಕಾರ್ – ಎಂಟು ಪ್ರಯಾಣಿಕರ ದಾರುಣ ಸಾ*ವು!

ಹಿಮಾಚಲ ಪ್ರದೇಶದ (Himachal Pradesh) ಚಂಬಾ ಜಿಲ್ಲೆಯಲ್ಲಿ ತಡರಾತ್ರಿ ಅತ್ಯಂತ ಭೀಕರ ರಸ್ತೆ ಅಪಘಾತವೊಂದು (Road Mishap) ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ಜಿಲ್ಲೆಯ ಚುರಾ ಉಪವಿಭಾಗದ ಬೈರ್ಗಢ-ಸಚ್ ಪಾಸ್-ಕಿಲ್ಲರ್ ರಸ್ತೆಯಲ್ಲಿ ಈ ದುರಂತ ನಡೆದಿದೆ. ಹಿಮಾಚಲ ಪ್ರದೇಶದ ಅತ್ಯಂತ ಕಠಿಣ ಹಾಗೂ ದುರ್ಗಮ ಪ್ರದೇಶಗಳಲ್ಲಿ ಒಂದೆಂದು ಗುರುತಿಸಿಕೊಂಡಿರುವ, ಸದಾ ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಕಡೆಗೆ ಈ ಕಾರು ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಅಡ್ಡಿ 

ಘಟನೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಚುರಾಹ್ ಕ್ಷೇತ್ರದ ಬಿಜೆಪಿ ಶಾಸಕ ಹನ್ಸ್ ರಾಜ್ ಅವರು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ಧಾವಿಸಿದೆ ಎಂದಿದ್ದಾರೆ. ಆದರೆ, ಅಪಘಾತ ನಡೆದಿರುವ ಆಳವಾದ ಕಂದಕವು ಅತ್ಯಂತ ಕಡಿದಾದ ಇಳಿಜಾರಿನಿಂದ ಕೂಡಿದೆ. ಇದರ ಜೊತೆಗೆ ಸ್ಥಳದಲ್ಲಿ ಹವಾಮಾನ ತೀವ್ರವಾಗಿ ಹದಗೆಟ್ಟಿರುವುದರಿಂದ ತಡರಾತ್ರಿ ಮೃತದೇಹಗಳನ್ನು ಮೇಲಕ್ಕೆತ್ತಲು ರಕ್ಷಣಾ ತಂಡಕ್ಕೆ ಸಾಧ್ಯವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಾಕ್ ನಿಂದ ಸ್ವದೇಶಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ – 22 ಆಫ್ಘಾನಿಗಳ ಸಾ*ವು!

ಹೆಚ್ಚಿನ ಸುದ್ದಿ

Change Language »
error: Content is protected !!