Wednesday, February 19, 2025
Homeಟಾಪ್ ನ್ಯೂಸ್ಶಾಸಕ ಮುನಿರತ್ನ ವಿರುದ್ಧ ಪೊಲೀಸರಿಗೆ ಕುಸುಮಾ ದೂರು

ಶಾಸಕ ಮುನಿರತ್ನ ವಿರುದ್ಧ ಪೊಲೀಸರಿಗೆ ಕುಸುಮಾ ದೂರು

ಬೆಂಗಳೂರು: ರಾಜರಾಜೇಶ್ವರಿನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಶಾಸಕ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಚುನಾವಣೆ ಹೊತ್ತಲ್ಲಿ ಹೊಡಿ ಬಡಿ ರಾಜಕಾರಣಕ್ಕೆ ಶಾಸಕ ಮುನಿರತ್ನ ಪ್ರಚೋದನೆ ನೀಡುತ್ತಿದ್ದಾರೆ ಎಂಬುದು ಕುಸುಮಾ ಆರೋಪ

ಸಚಿವ ಮುನಿರತ್ನ ಅವರು ಸಾರ್ವಜನಿಕ ಸಭೆಯಲ್ಲಿ ತಮಿಳಿನಲ್ಲಿ ಮಾತನಾಡುತ್ತ ‘ತಮಿಳು ಭಾಷಿಕರು ಕನ್ನಡ ಭಾಷಿಕರ ಮೇಲೆ ಹಲ್ಲೆ ಮಾಡುವಂತೆ ಸೂಚನೆ ನೀಡಿರುವ ಹೇಳಿಕೆ ಸಮೇತ ದೂರು ನೀಡಿದ್ದಾರೆ. ಈ ಮೂಲಕ ತಮಿಳು ಮತ್ತು ಕನ್ನಡಿಗರ ನಡುವೆ ವೈಷಮ್ಯದ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲು ಮಾಡಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!