ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿಲ್ಲಿ ಇಂದಿನಿಂದ ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಗಿಯಾದರು.
ಈ ವೇಳೆ ವೇದಿಕೆ ಮೇಲೆ ಸಮ್ಮೇಳನದ ಅಧ್ಯಕ್ಷ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರ ಆಶೀರ್ವಾದವನ್ನು ಪಡೆದುಕೊಂಡರು.
ಇದೇ ವೇಳೆ ನೆನಪಿನ ಕಾಣಿಕೆ ಸ್ವೀಕರಿಸಿದರು. ಇನ್ನು ಕನ್ನಡ ನಾಡಿನ ಶ್ರೀಮಂತ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಅನಾವರಣಗೊಳಿಸಲಿರುವ ಈ ಸಮ್ಮೇಳನವು ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದೆ. ಅನ್ನದಾತರ ನೆಲೆವೀಡಾದ ಮಂಡ್ಯದಲ್ಲಿ ಕನ್ನಡ ಡಿಂಡಿಮ ಮೊಳಗಲಿದೆ ಎಂದು ಡಿಕೆಶಿ ಅವರು ತಮ್ಮ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.