ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಡಿ.20 ರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಇಂದು ನುಡಿಜಾತ್ರೆಯಲ್ಲಿ ಏನೆಲ್ಲಾ ಕಾರ್ಯಕ್ರಮಗಳು, ಗೋಷ್ಠಿಗಳು ಇರಲಿವೆ ಎಂಬುವುದರ ಕುರಿತಾಗಿ ಸಂಕ್ಷಿಪ್ತ ಮಾಹಿತಿ ಹೀಗಿದೆ.
ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಬೆಳಗ್ಗೆ 9.30 ರಿಂದ ಗಂಟೆಯಿಂದ ನೆಲ-ಜಲ ಸಾಕ್ಷಾರತೆ : ಅವಲೋಕನ ವಿಷಯದ ಕುರಿತು ಗೋಷ್ಠಿ ನಡೆಯಲಿದೆ. ಈ ಬಗ್ಗೆ ನೀರಾವರಿ ತಜ್ಞರಾದ ಕ್ಯಾಪ್ಟನ್ ರಾಜಾರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾವೇರಿ ಅಚ್ಚುಕಟ್ಟಿನ ಕೆರೆಕಟ್ಟೆಗಳ ಸ್ಥಿತಿಗತಿಗಳು ವಿಷಯದ ಬಗ್ಗೆ ಡಾ. ಎಂ. ಎನ್. ತಿಮ್ಮೇಗೌಡ ಮುಂತಾದವರು ವಿಷಯ ಮಂಡನೆ ಮಾಡಲಿದ್ದಾರೆ.
ರಾಜಕೀಯ ಚಿಂತಕ ಸಿ.ಟಿ. ರವಿ ಅವರು ಸಾಹಿತ್ಯ ಕೇಂದ್ರಿತ ಸೈದ್ಧಾಂತಿಕ-ರಾಜಕೀಯ ನಿಲುವುಗಳು ವಿಷಯ, ರಾಜಕೀಯ ಚಿಂತಕ ಡಾ. ಕೆ. ಅನ್ನದಾನಿ ಅವರು ರಾಜಕಾರಣಿಗಳಿಗೆ ಇರಬೇಕಾದ ಸಾಹಿತ್ಯ ಪ್ರಜ್ಞೆ ಹಾಗೂ ರಾಜಕೀಯ ವಿಶ್ಲೇಷಕರು ರಾಜಕೀಯ ಚಿತ್ರಣ ವಿಷಯದ ಬಗ್ಗೆ ವಿಷಯ ಮಂಡಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.
ಇನ್ನು ಮಧ್ಯಾಹ್ನ ಮಂಡ್ಯ ನೆಲ ಮೂಲದ ಮೊದಲುಗಳು ವಿಷಯದ ಬಗ್ಗೆ ಗೋಷ್ಠಿ ನಡೆಯಲಿದ್ದು, ಕನ್ನಡದ ಖ್ಯಾತ ವಾಗ್ಮಿಗಳು ಪ್ರೊ.ಎಂ. ಕೃಷ್ಣೆಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.