Wednesday, August 19, 2026
Homeಟಾಪ್ ನ್ಯೂಸ್NARENDRA MODI: ಪಿಎಂ ಮೋದಿಗೆ ಶುಭ ಕೋರಿದ ಸ್ಯಾಂಡಲ್‌ವುಡ್ ಸ್ಟಾರ್ಸ್‌ ಕಿಚ್ಚ, ರಿಷಬ್ ಶೆಟ್ಟಿ

NARENDRA MODI: ಪಿಎಂ ಮೋದಿಗೆ ಶುಭ ಕೋರಿದ ಸ್ಯಾಂಡಲ್‌ವುಡ್ ಸ್ಟಾರ್ಸ್‌ ಕಿಚ್ಚ, ರಿಷಬ್ ಶೆಟ್ಟಿ

ಬೆಂಗಳೂರು: ದೇಶದ ರಾಜಕೀಯ ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಚುನಾಯಿತ ಪ್ರಧಾನಿಯಾಗಿ ಮುನ್ನಡೆಯುವ ಮೂಲಕ ನರೇಂದ್ರ ಮೋದಿಯವರು (Narendra Modi) ಹೊಸ ದಾಖಲೆ ಬರೆದಿದ್ದಾರೆ. ಈ ಹಿಂದೆ ಜವಾಹರಲಾಲ್ ನೆಹರೂ ಅವರ ಹೆಸರಿನಲ್ಲಿದ್ದ ಸುದೀರ್ಘ ಅವಧಿಯ ದಾಖಲೆಯನ್ನು ಹಿಂದಿಕ್ಕಿ ಮುನ್ನುಗ್ಗುತ್ತಿರುವ ಪ್ರಧಾನಿ ಮೋದಿಯವರಿಗೆ ದೇಶಾದ್ಯಂತ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದರ ನಡುವೆ, ಸ್ಯಾಂಡಲ್‌ವುಡ್‌ನ ಪ್ರಮುಖ ನಟರಾದ ಕಿಚ್ಚ ಸುದೀಪ್ ಹಾಗೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಪ್ರಧಾನಿ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಹೆಮ್ಮೆ ವ್ಯಕ್ತಪಡಿಸಿದ ಕಿಚ್ಚ ಸುದೀಪ್
ಪ್ರಧಾನಿ ಮೋದಿಯವರ ಈ ಐತಿಹಾಸಿಕ ಸಾಧನೆಗೆ ಸಾಮಾಜಿಕ ಜಾಲತಾಣದ ಮೂಲಕ ಸಂತಸ ಹಂಚಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಅವರ ನಿರಂತರ ಪರಿಶ್ರಮವನ್ನು ಕೊಂಡಾಡಿದ್ದಾರೆ.

“ನಾವು ಈ ಸಾಧನೆಯನ್ನು ಹೆಮ್ಮೆಯಿಂದ ಒಪ್ಪಿಕೊಳ್ಳಬೇಕು. ಕಳೆದ 12 ವರ್ಷಗಳಿಂದ ಯಾವುದೇ ನಿಧಾನಗತಿಯಿಲ್ಲದೆ, ಅದೇ ವೇಗ ಮತ್ತು ಅದೇ ಶಕ್ತಿಯೊಂದಿಗೆ ಅವರು ದೇಶ ಮುನ್ನಡೆಸುತ್ತಿದ್ದಾರೆ. ನರೇಂದ್ರ ಮೋದಿಯವರೇ, ನಿಮ್ಮ ಈ ಸಮರ್ಪಣಾ ಮನೋಭಾವ ಮತ್ತು ಸಾಧನೆಗೆ ನನ್ನ ಹೃದಯಪೂರ್ವಕ ನಮನಗಳು. ಇದು ನಮಗೆಲ್ಲರಿಗೂ ಹೆಮ್ಮೆಯ ಕ್ಷಣ. ನಿಮ್ಮ ಮುಂದಿನ ಎಲ್ಲಾ ಯತ್ನಗಳಿಗೂ ಶುಭವಾಗಲಿ” ಎಂದು ಸುದೀಪ್ ಹಾರೈಸಿದ್ದಾರೆ.

ವಿಕಸಿತ ಭಾರತಕ್ಕಾಗಿ ಅವಿಶ್ರಾಂತ ಸೇವೆ

ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಎಕ್ಸ್ ವೇದಿಕೆಯಲ್ಲಿ ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಪ್ರಶಂಸಿದ್ದಾರೆ. ಐತಿಹಾಸಿಕ ನಾಯಕನಿಗೆ ಇದೊಂದು ಮಹತ್ವದ ಮೈಲಿಗಲ್ಲು ಎಂದು ರಿಷಬ್‌ ಕರೆದಿದ್ದಾರೆ. ಭಾರತ ದೇಶದಲ್ಲಿ ಅತಿ ಹೆಚ್ಚು ಕಾಲ ಸತತವಾಗಿ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ‘ವಿಕಸಿತ ಭಾರತ’ದ ನಿರ್ಮಾಣಕ್ಕಾಗಿ ಅವರ ಅವಿಶ್ರಾಂತ ಸೇವೆ, ದೂರದೃಷ್ಟಿ ಹಾಗೂ ಸಮರ್ಪಣೆ ನಿಜಕ್ಕೂ ಶ್ಲಾಘನೀಯ. ರಾಷ್ಟ್ರವನ್ನು ನೀವು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಿರಿ” ಎಂದು ರಿಷಬ್ ಶೆಟ್ಟಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಮೋದಿಯವರ ಈ ಅಪರೂಪದ ದಾಖಲೆಗೆ ಸ್ಯಾಂಡಲ್‌ವುಡ್ ತಾರೆಗಳು ತೋರಿರುವ ಈ ಗೌರವ ಮತ್ತು ಹಾರೈಕೆಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: ಒಂಟಿ ಪುರುಷ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಹೆಚ್ಚಿನ ಸುದ್ದಿ

Change Language »
error: Content is protected !!