ಪುಣೆ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಲ್ಲಿ ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಪ್ರಕರಣದಲ್ಲೂ ಈತನನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟೆಕ್ಸ್ಟ್ ಮೆಸೇಜ್ ಮತ್ತು ಕರೆ ರೂಪದಲ್ಲಿ ರಾವತ್ ಅವರಿಗೆ ಬೆದರಿಕೆ ಒಡ್ಡಲಾಗಿದ್ದು, ನವದೆಹಲಿಯಲ್ಲಿ ಎಲ್ಲಾದರೂ ಕಾಣಿಸಿದರೆ ಎಕೆ-47ನಲ್ಲಿ ಗುಂಡಿಕ್ಕಿ ಕೊಲ್ಲಲಾಗುವುದು ಎಂದು ಹೇಳಲಾಗಿತ್ತು. ಇದಾದ ನಂತರ ರಾವತ್ ಪೊಲೀಸರಿಗೆ ದೂರು ಸಲ್ಲಿಸಿದ್ದರು.
“ಬೆದರಿಕೆ ಕರೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಆದರೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನನಗನಿಸುತ್ತಿಲ್ಲ. ಸರಕಾರ ಮತ್ತು ಗೃಹ ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡಿದರೆ ಅವರು ತಮಾಷೆ ಮಾಡುತ್ತಿದ್ದಾರೆ. ಸರಕಾರ ಗಲಭೆಗಳನ್ನು ಪ್ರಾಯೋಜಿಸುವುದರಲ್ಲಿ ಬ್ಯುಸಿ ಆಗಿದೆ” ಎಂದು ರಾವತ್ ಆರೋಪಿಸಿದ್ದಾರೆ.