Sunday, November 3, 2024
Homeಟಾಪ್ ನ್ಯೂಸ್ದ್ವಿತೀಯ ಪಿಯುಸಿ ಪರೀಕ್ಷೆ : ಮೌಲ್ಯಮಾಪನ ಪ್ರಾರಂಭ- ಮುಂದಿನ ತಿಂಗಳು ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆ : ಮೌಲ್ಯಮಾಪನ ಪ್ರಾರಂಭ- ಮುಂದಿನ ತಿಂಗಳು ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬುಧವಾರದಿಂದ ಪ್ರಾರಂಭವಾಗಿದೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪರೀಕ್ಷಾ ಶಿಕ್ಷಣ ಮಂಡಳಿ ಅಧ್ಯಕ್ಷ ಆರ್. ರಾಮಚಂದ್ರನ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಇಂದಿನಿಂದ ಪ್ರಾರಂಭವಾಗುವ ಮೌಲ್ಯಮಾಪನ ಪ್ರಕ್ರಿಯೆ ಸುಮಾರು 10-15 ದಿನಗಳಲ್ಲಿ ಮುಗಿಯಲಿದ್ದು, ರಾಜ್ಯದ್ಯಂತ 21,831 ಉಪನ್ಯಾಸಕರನ್ನು ಆಯೋಜಿಸಲಾಗಿದೆ. 37 ವಿಷಯಗಳಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಒಟ್ಟಾರೆ 44 ಲಕ್ಷ ಉತ್ತರಪತ್ರಿಕೆಗಳು ಮೌಲ್ಯಮಾಪನಕ್ಕೆ ಒಳಗಾಗಲಿವೆ.
ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೇ ಮೊದಲ ವಾರದಲ್ಲೇ ಫಲಿತಾಂಶವನ್ನು ಪ್ರಕಟಿಸುವುದಾಗಿ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.

ಹೆಚ್ಚಿನ ಸುದ್ದಿ

error: Content is protected !!