Saturday, January 25, 2025
Homeಟಾಪ್ ನ್ಯೂಸ್ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ: ವ್ಯಕ್ತಿ ಪೊಲೀಸ್ ವಶಕ್ಕೆ

ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ: ವ್ಯಕ್ತಿ ಪೊಲೀಸ್ ವಶಕ್ಕೆ

ದಾವಣಗೆರೆ: ಇಂದು ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಯಲ್ಲಿ ನಡೆದ ವಿಜಯಸಂಕಲ್ಪ ಮಹಾಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ರು.. ದಾವಣಗೆರೆ ಹೆಲಿಪ್ಯಾಡ್‌ನಲ್ಲಿ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಮೋದಿಗೆ ಅದ್ದೂರಿ ಸ್ವಾಗತವೂ ದೊರೆಯಿತು.

ಹೆಲಿಪ್ಯಾಡ್‌ನಿಂದ ರಸ್ತೆ ಮಾರ್ಗವಾಗಿ ತೆರೆದ ವಾಹನದಲ್ಲಿ ತೆರಳುತ್ತಿದ್ದ ಮೋದಿ, ನೆರೆದಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರತ್ತ ಕೈಬೀಸುತ್ತಾ ಸಾಗುತ್ತಿದ್ರು. ಈ ವೇಳೆ ಜನಸಂದಣಿಯ ಮಧ್ಯದಿಂದ ಓಡಿಬಂದ ವ್ಯಕ್ತಿಯೋರ್ವ ಮೋದಿಯವರತ್ತ ಮುನ್ನುಗ್ಗುತ್ತಿದ್ದ.. ತಕ್ಷಣವೇ ಎಚ್ಚೆತ್ತ ಪೊಲೀಸರು ವ್ಯಕ್ತಿಯನ್ನು ತಡೆದು ವಶಕ್ಕೆ ಪಡೆದ ಘಟನೆ ನಡೆದಿದೆ. ಕೆಲಕಾಲ ಸ್ಥಳದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿದ್ದನ್ನು ಪೊಲೀಸರು ನಿಯಂತ್ರಿಸಿದರಾದರೂ ಇದು ಭದ್ರತಾ ಲೋಪ ಎಂಬ ಟೀಕೆ ವ್ಯಕ್ತವಾಗಿದೆ.

ಹೆಚ್ಚಿನ ಸುದ್ದಿ

error: Content is protected !!