Sunday, July 7, 2024
Homeಕ್ರೀಡೆSHOAIB AKHTAR: ಭಗವದ್ಗೀತೆಯ ಸಂದೇಶ ಹಂಚಿಕೊಂಡ ಪಾಕ್‌ ಆಟಗಾರ!

SHOAIB AKHTAR: ಭಗವದ್ಗೀತೆಯ ಸಂದೇಶ ಹಂಚಿಕೊಂಡ ಪಾಕ್‌ ಆಟಗಾರ!

ಇಸ್ಲಾಮಾಬಾದ್‌: ಭಗವದ್ಗೀತೆಗೆ ಸಂಬಂಧಿಸಿದ ಸ್ಟೋರಿಯನ್ನು ಹಂಚಿಕೊಳ್ಳುವ ಮೂಲಕ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಸುದ್ದಿಯಾಗಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೊಯೇಬ್ ಅಖ್ತರ್ ಭಗವಾನ್ ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ ಭಗವದ್ಗೀತೆ ಶ್ಲೋಕವನ್ನು ಹಂಚಿಕೊಂಡಿದ್ದಾರೆ. ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರುವಿಲ್ಲ ಎನ್ನುವ ಶ್ಲೋಕದ ವಿಡಿಯೋವನ್ನು ಅಖ್ತರ್ ಶೇರ್ ಮಾಡಿದ್ದು, ಭಾರೀ ವೈರಲ್ ಆಗಿದೆ.

ಪಾಕಿಸ್ತಾನ್ ಕ್ರಿಕೆಟಿಗನ ಈ ಪೋಸ್ಟ್​ಗೆ ಭಾರತೀಯ ಕ್ರಿಕೆಟ್​ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಅತ್ತ ಪಾಕ್​ನ ಕೆಲವರು ತರಾಟೆ ತೆಗೆದುಕೊಂಡಿದ್ದಾರೆ.

ಶೊಯೇಬ್ ಅಖ್ತರ್ ಕೆಲ ದಿನಗಳ ಹಿಂದೆ ಮುಕ್ತಾಯಗೊಂಡ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಬೆಂಬಲ ಸೂಚಿಸಿದ್ದರು. ಅಲ್ಲದೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲಬೇಕೆಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ಹೆಚ್ಚಿನ ಸುದ್ದಿ