ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru ) ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಪಾರ್ಟಿ ಮಾಡುವ ನೆಪದಲ್ಲಿ ಯುವತಿಯನ್ನು ಕರೆಸಿಕೊಂಡು ಅತ್ಯಾಚಾರ (Sexual Harassment )ಎಸಗಿರುವ ಆಘಾತಕಾರಿ (Shocking ) ಘಟನೆ ನಡೆದಿದೆ.
ನಗರದ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಂತ್ರಸ್ತ ಯುವತಿಗೆ ಘಟನೆಯಲ್ಲಿ ಭಾಗಿಯಾದ ಐವರ ಪೈಕಿ ಇಬ್ಬರು ಯುವಕರು ಮೊದಲೇ ಪರಿಚಯವಿದ್ದರು ಎನ್ನಲಾಗಿದೆ. ಆರೋಪಿಗಳಲ್ಲೊಬ್ಬನಾದ ಸೋಮಶೇಖರ್ ಎಂಬಾತ, “ಕಲಬುರ್ಗಿಯಿಂದ ನಮ್ಮ ಸ್ನೇಹಿತರು ಬಂದಿದ್ದಾರೆ” ಎಂದು ಹೇಳಿ ಪಾರ್ಟಿ ಮಾಡುವ ನೆಪದಲ್ಲಿ ಯುವತಿಯನ್ನು ನಂಬಿಸಿ ಕರೆಸಿಕೊಂಡಿದ್ದಾನೆ. ಸಂತ್ರಸ್ತೆ ಮೂಲತಃ ದೇವನಹಳ್ಳಿಯ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪಾರ್ಟಿ ನೆಪದಲ್ಲಿ ಯುವತಿಯನ್ನು ಕರೆತಂದ ಆರೋಪಿಗಳು ತದನಂತರ ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ತಲಘಟ್ಟಪುರ ಠಾಣೆಯ ಪೊಲೀಸರು, ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಐವರನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಶನಿವಾರ ಸಂಜೆ ಸುಮಾರು 5:00 ಗಂಟೆಗೆ ಸೋಮಶೇಖರ್ ಯುವತಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ತಿಳಿಸಿದ್ದನು. ಅದರಂತೆ ಸಂಜೆ 7:00 ಗಂಟೆಯ ಸುಮಾರಿಗೆ ಯುವತಿ ಆರೋಪಿಗಳು ಇದ್ದ ಜಾಗಕ್ಕೆ ತೆರಳಿದ್ದಾಳೆ. ಅಲ್ಲಿ ಐವರು ಯುವಕರು ಸೇರಿ ಪಾರ್ಟಿ ಮಾಡುತ್ತಿದ್ದು, ಯುವತಿ ಕೂಡ ಅದರಲ್ಲಿ ಭಾಗಿಯಾಗಿದ್ದಾಳೆ. ಈ ಸಂದರ್ಭದಲ್ಲಿ ಆರೋಪಿಗಳಲ್ಲೊಬ್ಬನಾದ ಅಂಬರೀಶ ಎಂಬ ಕಾಮುಕ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಅಲ್ಲದೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಸೋಮಶೇಖರ್, ಅಂಬರೀಶ ಸೇರಿದಂತೆ ಐದೂ ಜನ ಆರೋಪಿಗಳನ್ನು ವಶಕ್ಕೆ ಪಡೆದು ಅರೆಸ್ಟ್ ಮಾಡಿದ್ದಾರೆ. ಸದ್ಯ ಈ ಭೀಕರ ಘಟನೆಗೆ ಸಂಬಂಧಿಸಿದಂತೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಜೈಶ್ ಉಗ್ರರ ಜೊತೆ ನಂಟು; ಗುಜರಾತ್ ಎಟಿಎಸ್‌ನಿಂದ ಭರ್ಜರಿ ಕಾರ್ಯಾಚರಣೆ, 8 ಮಂದಿ ಅರೆಸ್ಟ್