Wednesday, February 19, 2025
Homeಟಾಪ್ ನ್ಯೂಸ್ದಲಿತರು ಸೋಲಿಸುತ್ತಾರೆಂದು ಕೋಲಾರ ಬಿಟ್ಟು ಓಡಿ ಹೋದ ಸಿದ್ದರಾಮಯ್ಯ: ಬಿಜೆಪಿ ಲೇವಡಿ

ದಲಿತರು ಸೋಲಿಸುತ್ತಾರೆಂದು ಕೋಲಾರ ಬಿಟ್ಟು ಓಡಿ ಹೋದ ಸಿದ್ದರಾಮಯ್ಯ: ಬಿಜೆಪಿ ಲೇವಡಿ

ಚುನಾವಣೆ ಹತ್ತಿರ ಬಂದಂತೆ ಕರ್ನಾಟಕ ಕಾಂಗ್ರೆಸ್‌ ಪಕ್ಷಕ್ಕೆ ದಲಿತರ ನೆನಪಾಗಿದೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸರಣಿ ಟ್ವೀಟ್‌ ಮಾಡಿದ ಬಿಜೆಪಿ, ʼದಲಿತರು ಈ ಬಾರಿ ನಿಮ್ಮನ್ನು ಸೋಲಿಸುತ್ತಾರೆ ಎಂಬ ಸಮೀಕ್ಷೆ ಆಧರಿಸಿ ಕೋಲಾರ ಬಿಟ್ಟು ಓಡಿದ ಸಿದ್ದರಾಮಯ್ಯ ಅವರೇ, ದಲಿತ  ನಾಯಕರನ್ನು ಸೋಲಿಸಿದ ನೀವು ಯಾವ ಮುಖವಿಟ್ಟುಕೊಂಡು  ದಲಿತರಲ್ಲಿ ಓಟು ಕೇಳುತ್ತೀರಿ?ʼ ಎಂದು ಪ್ರಶ್ನಿಸಿದೆ.

 ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ದಲಿತ ನಾಯಕರಾದ ಡಾ.ಜಿ ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ, ಶ್ರೀನಿವಾಸ್ ಪ್ರಸಾದ್, ಮುನಿಯಪ್ಪ ಅವರನ್ನು ಮೂಲೆಗುಂಪು ಮಾಡಿತ್ತು. ಅಖಂಡ ಶ್ರೀನಿವಾಸಮೂರ್ತಿ ಮೇಲೆ ದಾಳಿ ನಡೆದಾಗಲು, ತುಷ್ಟೀಕರಣದ ಕಾರಣದಿಂದ ಅವರನ್ನು ಕಾಂಗ್ರೆಸ್ ಬೆಂಬಲಿಸಲಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ದಲಿತರನ್ನು ಮತ ಬ್ಯಾಂಕ್ ಆಗಿ ಬಳಸಿಕೊಂಡ ಕಾಂಗ್ರೆಸ್ ಪಕ್ಷವು ದಲಿತರಿಗೆ ಮೀಸಲಾತಿಯನ್ನು ಕೊಡುವುದನ್ನು ನಿರಾಕರಣೆ ಮಾಡಿತ್ತು. ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಿಸಿದ್ದು, ಲಂಬಾಣಿ ಸಮುದಾಯಕ್ಕೆ ಹಕ್ಕು ಪತ್ರವನ್ನು ವಿತರಣೆ ಮಾಡಿದ್ದು ನಮ್ಮ ಸರ್ಕಾರ ಎಂದು ಬಿಜೆಪಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದೆ.

ಹೆಚ್ಚಿನ ಸುದ್ದಿ

error: Content is protected !!