ಬೆಂಗಳೂರು: ಮುಂದಿನ ಸಿಎಂ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಕಸರತ್ತು ಮುಂದುವರೆದಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.
ಹೈಕಮಾಂಡ್ ಜೊತೆಗೆ ಸಿಎಂ ಸ್ಥಾನದ ಬಗ್ಗೆ ಚರ್ಚಿಸಲಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದು, ಸಿದ್ದು ನಿವಾಸದತ್ತ ಪೊಲೀಸ್ ಭದ್ರತೆ ಮಾಡಲಾಗಿದೆ.