Thursday, March 20, 2025
Homeಟಾಪ್ ನ್ಯೂಸ್ಕೋಲಾರದಿಂದಲೂ ಸ್ಪರ್ಧೆ ಮಾಡ್ತೀನಿ: ಸಿದ್ದರಾಮಯ್ಯ

ಕೋಲಾರದಿಂದಲೂ ಸ್ಪರ್ಧೆ ಮಾಡ್ತೀನಿ: ಸಿದ್ದರಾಮಯ್ಯ

ಮೈಸೂರು: ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಅನ್ನೋ ಗೊಂದಲದಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ವರುಣಾ ಹಾಗೂ ಕೋಲಾರದಿಂದ ಸ್ಪರ್ಧೆ ಮಾಡೋದಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ವರುಣಾ ಕ್ಷೇತ್ರದಿಂದ ಟಿಕೆಟ್‌ ನೀಡಿದ್ದು, ಕೋಲಾರ ಕ್ಷೇತ್ರಕ್ಕೂ ಟಿಕೆಟ್‌ ನೀಡುವಂತೆ ಸಿದ್ದರಾಮಯ್ಯ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಮಂಗಳವಾರ ಮೈಸೂರು ಜಿಲ್ಲೆಯ ಎಚ್‌ ಡಿ ಕೋಟೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಾ ಸಿದ್ದರಾಮಯ್ಯ, ವರುಣಾ ನನ್ನ ಹುಟ್ಟೂರು.. ನನ್ನ ಕೊನೆ ಚುನಾವಣೆ ಹುಟ್ಟೂರುನಲ್ಲಿ ಆಗಬೇಕೆಂಬ ಆಸೆ ನ್ನನ್ನದು ಎಂದಿದ್ದಾರೆ.

ಯಾವುದೇ ಒಂದು ಕ್ಷೇತ್ರ ಲಕ್ಕಿ ಅಂತ ಇಲ್ಲ; ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಎಂದ ಸಿದ್ದರಾಮಯ್ಯ. ಕೋಲಾರ ಜನರಿಂದಲೂ ಹೆಚ್ಚು ಒತ್ತಡ ಬರುತ್ತಿದ್ದು ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದ್ರು. ಎರಡು ಕ್ಷೇತ್ರದಲ್ಲಿ ಚುನಾವಣಗೆಯಲ್ಲಿ ತಾವು ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ

ಹೆಚ್ಚಿನ ಸುದ್ದಿ

error: Content is protected !!