Wednesday, February 19, 2025
Homeಟಾಪ್ ನ್ಯೂಸ್ಪರಿಣಾಮ ನೆಟ್ಟಗಿರಲ್ಲ: ಮಹಾರಾಷ್ಟ್ರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ

ಪರಿಣಾಮ ನೆಟ್ಟಗಿರಲ್ಲ: ಮಹಾರಾಷ್ಟ್ರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ

ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿ ಗ್ರಾಮಗಳಲ್ಲಿ ವಿಮೆ ಯೋಜನೆ ವಿಸ್ತರಿಸಿರುವುದನ್ನು ಸಿದರಾಮಯ್ಯ ಖಂಡಿಸಿದ್ದಾರೆ.

ಕನ್ನಡಿಗರ ತೀವ್ರ ವಿರೋಧದ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು ಎಂದು ಅವರು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಮತ್ತು ಅಮಿತ್ ಶಾ ಭರವಸೆ ನೀಡಿದ್ದರು. ಇವರಿಬ್ಬರ ಮಾತಿಗೆ ಮಹಾರಾಷ್ಟ್ರ ಸಿಎಂ ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು. ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಗಡಿವಿವಾದ ನ್ಯಾಯಾಲಯದ ಕಟಕಟೆಯಲ್ಲಿದೆ. ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ಇದೆ. ಈ ನಡುವೆ ರಾಜಕೀಯ ಲಾಭದ ದುರುದ್ದೇಶದಿಂದ ಮಹಾರಾಷ್ಟ್ರ ಆಗಾಗ ಗಡಿತಂಟೆಯನ್ನು ಕೆದಕುವ ಕಿಡಿಗೇಡಿತನ ಮಾಡುವುದು ಖಂಡನೀಯ. ಕನ್ನಡಿಗರು ಇದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!