ದಾವಣಗೆರೆ: ಬಾಲಿವುಡ್ ನಿರ್ಮಾಪಕರೊಬ್ಬರ ಕುಟುಂಬಕ್ಕೆ ಸೇರಿದ ಬಿಎಂಡಬ್ಲ್ಯೂ ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 39 ಲಕ್ಷ ಮೌಲ್ಯದ 66 ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್‌ಪೋಸ್ಟ್ನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರು ಹಾಗೂ ಚುನಾವಣೆ ಅಧಿಕಾರಿಗಳು ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ದಾಖಲೆ ಇಲ್ಲದೆ ಹಣ, ಮದ್ಯ ಇನ್ನಿತರ ಸಾಮಾನುಗಳ ಸಾಗಾಣಿಕೆಗೆ ಕಡಿವಾಣ ಹಾಕಲು ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
ಮಾಯಗೊಂಡ ವಿಧಾನಸಭಾ ಕ್ಷೇತ್ರದ ಹೆಬ್ಬಾಳ ಚೆಕ್‌ಪೋಸ್ಟ್ ಮಾರ್ಗವಾಗಿ ಬಂದ ಬಿಎಂಡಬ್ಲ್ಯೂ ಕಾರನ್ನು ಪೋಲೀಸರು ಹಾಗೂ ಚುನಾವಣಾ ಸಿಬ್ಬಂದಿ ತಡೆದು ಪರಿಶೀಲಿಸಿದಾಗ ಪತ್ತೆಯಾಗಿದೆ.
ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.