Monday, April 13, 2026
Homeಟಾಪ್ ನ್ಯೂಸ್BENGALURU : ಕೆಟ್ಟ ವ್ಯವಸ್ಥೆ, ಟ್ರಾಫಿಕ್‌ ಪೊಲೀಸರು ವೇಸ್ಟ್‌ - ಬೆಂಗಳೂರಿನ ಟ್ರಾಫಿಕ್‌...

BENGALURU : ಕೆಟ್ಟ ವ್ಯವಸ್ಥೆ, ಟ್ರಾಫಿಕ್‌ ಪೊಲೀಸರು ವೇಸ್ಟ್‌ – ಬೆಂಗಳೂರಿನ ಟ್ರಾಫಿಕ್‌ ಬಗ್ಗೆ ಕಿಡಿಕಾರಿದ ಯುಪಿ ಸಂಸದ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ(Bengaluru) ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಈ ಮಧ್ಯೆ ಬೆಂಗಳೂರಿನ ಕೆಟ್ಟ ಟ್ರಾಫಿಕ್(Traffic) ಬಗ್ಗೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ(MP Rajeev Rai) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಆಕ್ರೋಶ ಹೊರ ಹಾಕಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಟ್ಯಾಗ್ ಮಾಡಿ ಬೆಂಗಳೂರು ಕೆಟ್ಟ ಸಂಚಾರ ವ್ಯವಸ್ಥೆ ಹೊಂದಿದೆ ಎಂದಿದ್ದಾರೆ.
ಬೆಂಗಳೂರಿನ ಟ್ರಾಫಿಕ್ ಬಿಸಿ ಅವರಿಗೂ ಭಾನುವಾರ ತಟ್ಟಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಟ್ಯಾಗ್ ಮಾಡಿದ್ದಾರೆ.

ಇತ್ತೀಚಿಗೆ ಶುಭಾಂಶು ಶುಕ್ಲ ಕೂಡಾ ಬೆಂಗಳೂರಿನ ಟ್ರಾಫಿಕ್‌ ಬಗ್ಗೆ ಲೇವಡಿ ಮಾಡಿದ್ದರು.

ಎಸ್‌ಪಿ ಸಂಸದ ರಾಜೀವ್ ರೈ ಹೇಳಿದ್ದೇನು?

ಕರ್ನಾಟಕದ ಮುಖ್ಯಮಂತ್ರಿಗಳೇ ಬೆಂಗಳೂರಿನದ್ದು ಅತ್ಯಂತ ಕೆಟ್ಟ ಸಂಚಾರ ವ್ಯವಸ್ಥೆ. ಜವಾಬ್ದಾರಿ ಇಲ್ಲದ, ಪ್ರಯೋಜನಕ್ಕೆ ಬಾರದ ಸಂಚಾರ ಪೊಲೀಸರು. ಅವರು ಕನಿಷ್ಠಪಕ್ಷ ದೂರವಾಣಿ ಕರೆಯನ್ನು ಕೂಡ ಸ್ವೀಕರಿಸುವುದಿಲ್ಲ. ನಾನು ಎಷ್ಟು ಬಾರಿ ಫೋನ್ ಮಾಡಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಯನ್ನು ಕೂಡ ಇಲ್ಲಿ ಲಗತ್ತಿಸಿದ್ದೇನೆ. ಸುಮಾರು ಒಂದು ಗಂಟೆಯಿಂದ ನಾವು ರಾಜಕುಮಾರ್ ಸಮಾಧಿ ಬಳಿ ರಸ್ತೆಯಲ್ಲಿ ಸಂಚಾರದಟ್ಟಣೆಯಲ್ಲಿ ಸಿಲುಕಿದ್ದೇವೆ. ಇದರಿಂದಾಗಿ ನಮಗೆ ವಿಮಾನ ತಪ್ಪಲಿದೆ. ಸಂಸತ್ ಅಧಿವೇಶನಕ್ಕೆ ಹಾಜರಾಗುವುದಕ್ಕೆ ಕೂಡ ಅಡ್ಡಿಯಾಗಲಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಈ ಬೆಂಗಳೂರು ಸಂಚಾರ ದಟ್ಟಣೆ ಅತ್ಯಂತ ಕುಖ್ಯಾತಿ ಗಳಿಸಿದೆ ಎಂಬುದರಲ್ಲಿ ಸಂದೇಹವಿಲ್ಲ’ ಎಂದು ರಾಜೀವ್ ರೈ ಎಕ್ಸ್ ಸಂದೇಶದಲ್ಲಿ ಭಾನುವಾರ ಹೇಳಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಸಂಬಂಧಿಸಿದ ಯಾವೆಲ್ಲ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿದ್ದರೂ ಅವುಗಳ ಸ್ಕ್ರೀನ್‌ಶಾಟ್ ಲಗತ್ತಿಸಿದ್ದಾರೆ. ಯಾವ ಕರೆಗೂ ಟ್ರಾಫಿಕ್ ಪೊಲೀಸರು ಸ್ಪಂದಿಸಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಜೈಲಿನಲ್ಲಿ ಕೈದಿಗಳ ಕಳ್ಳಾಟಕ್ಕೆ ಬ್ರೇಕ್ – ಕಾರಾಗೃಹ ಸಿಬ್ಬಂದಿಗಳಿಗೆ ಬಾಡಿವೋರ್ನ್ ಕ್ಯಾಮೆರಾ ಕಡ್ಡಾಯ!

ಹೆಚ್ಚಿನ ಸುದ್ದಿ

Change Language »
error: Content is protected !!