Sunday, July 7, 2024
Homeಟಾಪ್ ನ್ಯೂಸ್Job Alert: ಸಿಬ್ಬಂದಿ ನೇಮಕಾತಿ ಆಯೋಗದಿಂದ ನೇಮಕಾತಿ ಅಧಿಸೂಚನೆ; ಎಸ್​ಎಸ್​ಎಲ್​ಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ...

Job Alert: ಸಿಬ್ಬಂದಿ ನೇಮಕಾತಿ ಆಯೋಗದಿಂದ ನೇಮಕಾತಿ ಅಧಿಸೂಚನೆ; ಎಸ್​ಎಸ್​ಎಲ್​ಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗವು 8,326 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಟಿಎಸ್ (ತಾಂತ್ರಿಕೇತರ)​ ಮತ್ತು ಹವಾಲ್ದಾರ್​ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ (ತಾಂತ್ರಿಕೇತರ) – 4,887

ಸಿಬಿಐಸಿ ಮತ್ತು ಸಿಬಿಎನ್​ನಲ್ಲಿ ಹವಾಲ್ದಾರ್ – 3,439

ವಿದ್ಯಾರ್ಹತೆ: ಅಧಿಕೃತ ಮಂಡಳಿಯಿಂದ ಎಸ್​ಎಸ್​ಎಲ್​ಸಿ ಅಥವಾ ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಎಂಟಿಎಸ್​ ಹುದ್ದೆಗೆ ಗರಿಷ್ಠ 25 ವರ್ಷ, ಹವಾಲ್ದಾರ್​​ ಹುದ್ದೆಗೆ ಗರಿಷ್ಠ 27 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ, ವಿಶೇಷಚೇತನ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಭರಿಸಬೇಕಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಮೂಲಕ ಆಯ್ಕೆ.

ಅಭ್ಯರ್ಥಿಗಳು ಜೂನ್​ 27ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 31 ಕಡೇಯ ದಿನ. ನವೆಂಬರ್​ನಲ್ಲಿ ಕಂಪ್ಯೂಟರ್​ ಆಧರಿತ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿಗೆ ssc.gov.in ಇಲ್ಲಿಗೆ ಭೇಟಿ ನೀಡಿ.

ಹೆಚ್ಚಿನ ಸುದ್ದಿ