ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನೂ ಸ್ಥಾಪಿಸಲಾಗಿದ್ದು, ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಬಂದೋಬಸ್ತ್ ಇರಲಿದೆ.
ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಅಂತಹ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ತರುವಂತಿಲ್ಲ. ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಬಂದ್ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ
SSLC ಪರೀಕ್ಷೆ ವೇಳಾಪಟ್ಟಿ ವಿವರ
ಮಾರ್ಚ್31 – ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ
ಏಪ್ರಿಲ್ 3 – ಗಣಿತ ಹಾಗೂ ಸಮಾಜ ಶಾಸ್ತ್ರ
ಏಪ್ರಿಲ್ 6 – ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
ಏಪ್ರಿಲ್ 8 – ಅರ್ಥಶಾಸ್ತ್ರ, ಏಪ್ರಿಲ್ 10-ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12 – ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ
ಏಪ್ರಿಲ್ 15 – ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ
ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080-23310075/76 ಸಂಪರ್ಕಿಸಬಹುದಾಗಿದೆ.
ಇನ್ನು ವಿದ್ಯಾರ್ಥಿಗಳು ಪರೀಕ್ಷೆಯ ದಿನಗಳಂದು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ