Friday, March 13, 2026
Homeಬೆಂಗಳೂರುಇಂದಿನಿಂದ SSLC ಪರೀಕ್ಷೆ ಆರಂಭ

ಇಂದಿನಿಂದ SSLC ಪರೀಕ್ಷೆ ಆರಂಭ

ಶುಕ್ರವಾರದಿಂದ ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಏ.15 ರವರೆಗೆ ನಡೆಯಲಿರುವ ಪರೀಕ್ಷೆಗಾಗಿ ಒಟ್ಟಾರೆ 3,305 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ.

ಇಂದು ಪ್ರಥಮ ಭಾಷೆ ಪರೀಕ್ಷೆ ನಡೆಯಲಿದ್ದು ಕನ್ನಡ, ಹಿಂದಿ, ಇಂಗ್ಲಿಷ್, ಸಂಸ್ಕøತ, ತೆಲುಗು, ತಮಿಳು, ಉರ್ದು, ಮರಾಠಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ಜರುಗಲಿದೆ. 2010 ಕ್ಕೂ ಮುನ್ನ ಪರೀಕ್ಷೆಯಲ್ಲಿ ನಪಾಸಾದ ವಿದ್ಯಾರ್ಥಿಗಳಿಗೂ ಈಗ ಮರುಪರೀಕ್ಷೆಯ ಅವಕಾಶ ಕಲ್ಪಿಸಲಾಗಿದೆ. 2010 ಕ್ಕೂ ಪರೀಕ್ಷೆ ಬರೆದಿದ್ದ 15 ಖಾಸಗಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!