ಶುಕ್ರವಾರದಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಯಾವುದೇ ಪರೀಕ್ಷಾ ಅಕ್ರಮ ನಡೆಯದಿರುವುದು ಮೊದಲ ಹೆಗ್ಗಳಿಕೆಯಾದರೆ, ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ ಶೇ 98.48 ಮಂದಿ ಹಾಜರಾಗಿದ್ದಾರೆ.
ಹಾಜರಾತಿಯಲ್ಲಿ ಕಲಬುರಗಿ ಕೊನೆಯ ಸ್ಥಾನದಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ ಪ್ರಥಮ ಸ್ಥಾನದಲ್ಲಿದೆ.
8,27,276 ವಿದ್ಯಾರ್ಥಿಗಳ ಪೈಕಿ ಇಂದು 12,550 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.