ಹೈದರಾಬಾದ್: ತೆಲಂಗಾಣ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಕೆ. ಸಿ. ಚಂದ್ರಶೇಖರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ರಾಜ್ಯದಲ್ಲಿ ರಾಜ್ಯ ಸರ್ಕಾರವು ಕೇಂದ್ರದ ಯೋಜನೆಗಳನ್ನು ತಡೆಯುತ್ತಿದೆ ಮತ್ತು ವಂಶಪಾರಂಪರ್ಯ ರಾಜಕಾರಣವನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ತೆಲಂಗಾಣದ ಕೋಟ್ಯಾಂತರ ಜನರಿಗೆ ಸಹಾಯವಾಗಬಲ್ಲ ಕೇಂದ್ರ ಸರ್ಕಾರದ ಯೋಜನೆಗಳು ಜಾರಿಯಾಗಲು ಕೆಸಿಆರ್ ಸರಕಾರ ಸಹಕರಿಸುತ್ತಿಲ್ಲ ಎಂದವರು ಹೇಳಿದರು.
ವಿವಿಧ ಯೋಜನೆಗಳನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ಮೋದಿ ಇಂದು ತೆಲಂಗಾಣಕ್ಕೆ ಭೇಟಿ ನೀಡಿದ್ದಾರೆ.