ನವದೆಹಲಿ: ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೀವ್ರವಾಗಿ ಖಂಡಿಸಿದ್ದಾರೆ.
ಕಳೆದ ವಾರ ಕೆನಡಾದ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಗೇಟ್‌ಗಳನ್ನು ಒಡೆದು ಧ್ವಂಸಗೊಳಿಸಿದ ಆಘಾತಕಾರಿ ಘಟನೆಯನ್ನು ಉಲ್ಲೇಖಿಸಿ ಎಕ್ಸ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ಮೋದಿ, ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ಉದ್ದೇಶಪೂರ್ವಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ನಮ್ಮ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳಾಗಿವೆ ಎಂದಿದ್ದಾರೆ.
I strongly condemn the deliberate attack on a Hindu temple in Canada. Equally appalling are the cowardly attempts to intimidate our diplomats. Such acts of violence will never weaken India’s resolve. We expect the Canadian government to ensure justice and uphold the rule of law.
— Narendra Modi (@narendramodi) November 4, 2024
ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರವು ನ್ಯಾಯವನ್ನು ಖಚಿತಪಡಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಬರೆದಿದ್ದಾರೆ.
ದೇವಾಲಯದಲ್ಲಿ ನಡೆದ ಘಟನೆ ಮತ್ತು ಆ ದಾಳಿಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದವರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಇದಾದ ಬಳಿಕ ಸಚಿವಾಲಯದ ಪ್ರತಿಕ್ರಿಯೆ ಬಂದಿದೆ. ಪ್ರತಿಭಟನಕಾರರ ಮೇಲೆ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋ ಕೂಡಾ ಭಾರೀ ವೈರಲ್ ಆಗುತ್ತಿದೆ.