ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಇಲಾಖೆಯು ಮಹತ್ವದ ಮಾಹಿತಿ ನೀಡಿದೆ.
ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ನ್ನು ಮೇ.26 ರಿಂದ ಜೂನ್ 2ರವರೆಗೆ ನಡೆಸಲಾಗುತ್ತಿದ್ದು, ಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿರುತ್ತದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಇದೇ ಮೇ.10 ರಂದು ಅಂತಿಮ ದಿನಾಂಕವಾಗಿದೆ ಎಂದು ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಎನ್.ಸಿ. (NC-Not Completed) ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶ ಬಳಸಿಕೊಂಡು ಬೆಂಗಳೂರು ದಕ್ಷಿಣ ಜಿಲ್ಲೆಯ ಎಲ್ಲಾ ಎನ್.ಸಿ. ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.