ಬೆಂಗಳೂರು: ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ ವ್ಯವಸ್ಥಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಪರ್ಣ ಕುಮಾರಿ (27) ಎಂಬ ಯುವತಿ ಯುಟಿಲಿಟಿ ಬಿಲ್ಡಿಂಗ್ ನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿದೆ.
ಮಹಿಳೆ ಜಿಗಿದ ಸ್ಥಳದಲ್ಲಿ ಒಂದು ಸೀರೆ ಕಾಣುತ್ತಿತ್ತು. ಆಗ ಅಲ್ಲಿ ಮತ್ತೋರ್ವ ವ್ಯಕ್ತಿ ಕೈ ಹಿಡಿದುಕೊಂಡಿದ್ದು ಸಹ ಕಾಣುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಜೊತೆಗೆ ಬೀಳುವಾಗಲೂ ಸಹ ಸಹಾಯಕ್ಕಾಗಿ ಅರಚಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದ್ದು, ಆತ್ಮಹತ್ಯೆಯೂ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಎಸ್‍ಜೆ ಪಾರ್ಕ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿಯ ಕೌಟುಂಬಿಕ ಹಿನ್ನೆಲೆ ಬಗ್ಗೆ ತನಿಖೆ ಪ್ರಾರಂಭವಾಗಿದೆ.