ಸರ್ಕಾರ ಐದು ಮತ್ತು ಎಂಟನೆ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯಿದೆಯಡಿ ಯಾವುದೇ ನಿರ್ಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮನವಿಯನ್ನು ಪರಿಶೀಲಿಸಿದ ನ್ಯಾಯಪೀಠ ಈ ಆದೇಶವನ್ನು ನೀಡಿದೆ.
ಐದು ಮತ್ತು ಎಂಟನೇ ತರಗತಿಗೆ ಕರ್ನಾಟಕ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿಯು ನಡೆಸುವ ಮೌಲ್ಯಾಂಕನ ಪರೀಕ್ಷೆ ನಡೆಸಬಾರದು ಎಂದು ಲೋಕೇಶ್ ತಾಳಿಕಟ್ಟೆ ಹೈಕೋರ್ಟ್‍ನಲ್ಲಿ ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಸರ್ಕಾರಕ್ಕೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಮಾ 27 ರಿಂದ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು. ಇದನ್ನು ಪ್ರಶ್ನಿಸಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ತುರ್ತು ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಪರೀಕ್ಷೆ ನಡೆಸಲು ಸರ್ಕಾರಕ್ಕೆ ಅನುವು ಮಾಡಿಕೊಟ್ಟಿದೆ.