ʼಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆʼ ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ತೀರ್ಪು ಹೊರ ಬಿದ್ದಿದ್ದು, ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಸೂರತ್ ನ್ಯಾಯಾಲಯ ಹೇಳಿದೆ.
ಐಪಿಸಿ ಸೆಕ್ಷನ್ 504 ರ ಅಡಿಯಲ್ಲಿ ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿಸಿದೆ.
“ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಏಕೆ ಇದ್ದಾರೆ” ಎಂದು ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗೆ ಸಂಬಂಧಿಸಿ 2019 ರಲ್ಲಿ ಗುಜರಾತ್ ಬಿಜೆಪಿ ಶಾಸಕರೊಬ್ಬರು ಕೇಸ್ ದಾಖಲಿಸಿದ್ದರು. ರಾಹುಲ್ ಗಾಂಧಿ ಅವರು ತಮ್ಮ ಹೇಳಿಕೆಯಿಂದ ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ ಎಂದು ಶಾಸಕ ಪೂರ್ಣೇಶ್ ಮೋದಿ ಆರೋಪಿಸಿದ್ದರು.