ತಿರುವನಂತಪುರಂ: ಕೇರಳ ರೈಲಿನಲ್ಲಿಸಹಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯನ್ನು ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ತಂಡ ಬುಧವಾರ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬಂಧಿಸಿದೆ.
ಕೇರಳ ಪೊಲೀಸರ ತಂಡ ರತ್ನಗಿರಿ ತಲುಪಿದ್ದು, ಆರೋಪಿಯನ್ನು ಶೀಘ್ರದಲ್ಲೇ ಅವರಿಗೆ ಶಂಕಿತ ಆರೋಪಿಯನ್ನು ಹಸ್ತಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಎಟಿಎಸ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ರೈಲಿನ ಕೋಚ್‌ಗಳನ್ನು ಪರಿಶೀಲಿಸಿತು.
ಭಾನುವಾರ ರಾತ್ರಿ ಚಲಿಸುತ್ತಿರುವ ರೈಲಿನ ಕಂಪಾರ್ಟ್‌ಮೆಂಟ್‌ನೊಳಗೆ ಅಪರಿಚಿತ ವ್ಯಕ್ತಿಯೊಬ್ಬ ಇತರೆ ಸಹ ಪ್ರಯಾಣಿಕರೊಬ್ಬರ ಮೇಲೆ ಬೆಂಕಿ ಹಚ್ಚಿದ ಬಳಿಕ ಮೂವರು ಸಾವಿಗೀಡಾಗಿದ್ದರು. ಹಲವರಿಗೆ ಸುಟ್ಟ ಗಾಯಗಳಾಗಿದ್ದವು. ಕೋಯಿಕ್ಕೋಡ್ ಜಿಲ್ಲೆಯ ಎಲತ್ತೂರು ಬಳಿ ಆಲಪ್ಪುಳ-ಕಣ್ಣೂರು ಮುಖ್ಯ ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನ ಕಂಪಾರ್ಟ್‌ಮೆಂಟಿನೊಳಗೆ ಶಂಕಿತ ವ್ಯಕ್ತಿ ಪ್ರಯಾಣಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಕೇರಳ ಪೊಲೀಸರು ಶಂಕಿತ ವ್ಯಕ್ತಿಯ ರೇಖಾಚಿತ್ರವನ್ನು ಸಿದ್ಧಪಡಿಸಿದ್ದರು. ಇದೀಗ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.