Sunday, July 7, 2024
Homeಕ್ರೀಡೆT-20 World Cup: ಕಪ್‌ ಗೆದ್ದ ಭಾರತ : ಪಿಎಂ ಸಿಎಂ ವಿಶ್!

T-20 World Cup: ಕಪ್‌ ಗೆದ್ದ ಭಾರತ : ಪಿಎಂ ಸಿಎಂ ವಿಶ್!

ವೆಸ್ಟ್ ಇಂಡಿಸ್: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಗೆದ್ದು ಟಿ 20 ವಿಶ್ವಕಪ್ ಜಯಿಸಿದ ಬಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ತಡರಾತ್ರಿ ಲೈವ್ ಬಂದು ಅಭಿನಂದನೆ ಸಲ್ಲಿಸಿದ್ದಾರೆ.
ಈ ಗೆಲುವಿನಿಂದ ಭಾರತದ ಗಲ್ಲಿ ಗಲ್ಲಿಗಳಲ್ಲಿ 140 ಕೋಟಿ ಭಾರತೀಯರು ಸಂಭ್ರಮಿಸುತ್ತಿದ್ದಾರೆ. ಸರಣಿಯಲ್ಲಿ ಒಂದೂ ಪಂದ್ಯ ಸೋಲದೆ ಪ್ರಶಸ್ತಿ ಗೆದ್ದಿರುವುದು ಸಣ್ಣ ಸಾಧನೆಯಲ್ಲ. ನಾನು ತಂಡದ ಪ್ರತಿಯೊಬ್ಬ ಆಟಗಾರ ಮತ್ತು ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಹೇಳಿದರು.


ಇನ್ನು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕೂಡಾ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದು, ಆಟಗಾರರು ಭಾರತಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ

ಸಿಎಂ ಅಭಿನಂಧನೆ:
ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು.
ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಭಾರತ ತಂಡಕ್ಕೆ ಅಭಿನಂಧನೆ ತಿಳಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕೆ ಸಂಭ್ರಮ:
ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡಕ್ಕೆ ಶುಭಾಶಯಗಳು ಮತ್ತು ಸಮಸ್ತ ಭಾರತೀಯರ ಪರವಾಗಿ ಅಭಿನಂದನೆಗಳು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದ್ದಾರೆ.

 

 

ಹೆಚ್ಚಿನ ಸುದ್ದಿ