Sunday, July 7, 2024
Homeಕ್ರೀಡೆT-20 World Cup: ಟಿ-2೦ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಔಟ್!

T-20 World Cup: ಟಿ-2೦ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಔಟ್!

ಫ್ಲೋರಿಡಾ: ಸೂಪರ್ 8 ಹಂತಕ್ಕೆ ಪ್ರವೇಶಿಸುವ ಮುನ್ನವೇ ಪಾಕಿಸ್ತಾನ ತಂಡ ಈ ಬಾರಿಯ ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ.

ಅಮೆರಿಕ, ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದಾಗಿದ್ದ ಪರಿಣಾಮ ಅಮೆರಿಕ ಅಧಿಕೃತವಾಗಿ ಸೂಪರ್ 8 ಪ್ರವೇಶಿಸಿದ್ದು ಪಾಕ್ ಕನಸು ನುಚ್ಚು ನೂರಾಗಿದೆ.

ಮೊದಲ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ ಸೋತಿದ್ದ ಪಾಕಿಸ್ತಾನ್ ತಂಡವು ತನ್ನ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಮಂಡಿಯೂರಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಜಯಗಳಿಸುವ ಮೂಲಕ ಗೆಲುವಿನ ಖಾತೆ ತೆರೆದಿತ್ತು. ಈ ಗೆಲುವಿನೊಂದಿಗೆ ಸೂಪರ್-8 ಹಂತಕ್ಕೇರುವ ಆಸೆಯನ್ನು ಜೀವಂತವರಿಸಿಕೊಂಡಿದ್ದ ಪಾಕ್ ಪಡೆಗೆ ವರುಣ ಅಡ್ಡಿಯಾಗಿದ್ದಾನೆ. ಅಂದರೆ ಯುಎಸ್‌ಎ ವಿರುದ್ಧದ ಪಂದ್ಯದಲ್ಲಿ ಐರ್ಲೆಂಡ್ ತಂಡ ಗೆದ್ದಿದ್ದರೆ, ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್-8 ಹಂತಕ್ಕೇರುವ ಅವಕಾಶ ಹೊಂದಿತ್ತು.

ಆದರೆ ಯುಎಸ್‌ಎ ಮತ್ತು ಐರ್ಲೆಂಡ್ ನಡುವಣ ಪಂದ್ಯವು ಮಳೆಯಿಂದ ರದ್ದಾಗಿದ್ದು, ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿದೆ. ಇದರೊಂದಿಗೆ ಒಟ್ಟು 5 ಪಾಯಿಂಟ್ಸ್ ಪಡೆದಿರುವ ಯುಎಸ್‌ಎ ತಂಡವು ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ.

ಇನ್ನು ಕೊನೆಯ ಪಂದ್ಯದಲ್ಲಿ ಪಾಕ್ ತಂಡ ಕೆನಡಾ ವಿರುದ್ಧ ಗೆಲುವು ಸಾಧಿಸಿದರೂ ಒಟ್ಟು 4 ಅಂಕ ಮಾತ್ರ ಹೊಂದಲಿದೆ. ಹಾಗಾಗಿ ಅಂತಿಮ ಪಂದ್ಯಕ್ಕೂ ಮುನ್ನವೇ ಪಾಕ್ ಪಡೆ ಟಿ-20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಇನ್ನು ಪಾಕ್ ಜೊತೆಗೆ ಎ ಗುಂಪಿನಲ್ಲಿದ್ದ ಕೆನಡಾ ಮತ್ತು ಐರ್ಲೆಂಡ್ ತಂಡಗಳು ಸಹ ಟೂರ್ನಿಯಿಂದ ಹೊರಬಿದ್ದಿದೆ.

ಹೆಚ್ಚಿನ ಸುದ್ದಿ